ಕನಕಗಿರಿಯಲ್ಲಿ ಡಿವೈಎಫ್‌ಐ ಸಂಸ್ಥಾಪನಾ ದಿನಾಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು


DYFI Foundation Day Celebrations in Kanakagiri

ಜಾಹೀರಾತು

ಕನಕಗಿರಿಯಲ್ಲಿ ಡಿವೈಎಫ್‌ಐ ಸಂಸ್ಥಾಪನಾ ದಿನಾಚರಣೆ


ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೆ ತರಲು ಆಗ್ರಹ: ಅಮರೇಶ ಕಡಗದ


ಕನಕಗಿರಿ, ನ.3: ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (DYFI) ಸಂಘಟನೆ 1980ರ ನವೆಂಬರ್ 3ರಂದು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಸಂಘಟನೆಯ ಸಂಸ್ಥಾಪನಾ ದಿನಾಚರಣೆಯನ್ನು ಮಂಗಳವಾರ ಕನಕಗಿರಿಯ ಡಿವೈಎಫ್‌ಐ ಕಚೇರಿಯಲ್ಲಿ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಸಂಚಾಲಕ ಅಮರೇಶ ಕಡಗದ, ದೇಶ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ, ಉದ್ಯೋಗಾವಕಾಶಗಳ ಕೊರತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತು ಮಾತನಾಡಿದರು.


ಸರ್ಕಾರಗಳು ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರಿ ಉದ್ಯೋಗಗಳ ಜೊತೆಗೆ ಖಾಸಗಿ ವಲಯದಲ್ಲಿಯೂ ಸಾಮಾಜಿಕ ನ್ಯಾಯದ ತತ್ವದ ಆಧಾರದ ಮೇಲೆ ಮೀಸಲಾತಿ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.


ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೊಳಿಸುವುದರಿಂದ ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು ಹಾಗೂ ಅವಕಾಶ ವಂಚಿತ ಯುವಜನರಿಗೆ ಉದ್ಯೋಗಾವಕಾಶ ದೊರೆಯಲು ಸಹಕಾರಿಯಾಗಲಿದೆ. ಯುವಜನರಿಗೆ ಗುಣಮಟ್ಟದ ಶಿಕ್ಷಣ, ಉದ್ಯೋಗ ಹಾಗೂ ಗೌರವಯುತ ಜೀವನ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಡಿವೈಎಫ್‌ಐ ಜಿಲ್ಲಾ ಸಂಚಾಲಕ ಅಮರೇಶ ಕಡಗದ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ, ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಕನಕಗಿರಿ ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ, ಡಿವೈಎಫ್‌ಐ ಮುಖಂಡರಾದ ತಿರುಪತಿ, ತಿಮ್ಮಣ್ಣ, ಕೃಷ್ಣ, ಯಮನೂರ, ಸಿಐಟಿಯು ಕನಕಗಿರಿ ತಾಲೂಕು ಸಂಚಾಲಕರಾದ ಮಲ್ಲಪ್ಪ ಮ್ಯಾಗಡೆ, ಪರಶುರಾಮ ಸೇರಿದಂತೆ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.


ಯುವಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟವನ್ನು ಮುಂದುವರಿಸುವ ಸಂಕಲ್ಪದೊಂದಿಗೆ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

Total Views: 0
ಜಾಹೀರಾತು
Share This Article
Leave a Comment