ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
Extension of the application period for various schemes of the Women’s Development Corporation
ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ, ನವೆಂಬರ್ 03 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 30ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
 ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9972033371 ಗೆ ಸಂಪರ್ಕಿಸುವಂತೆ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
ಜಾಹೀರಾತು
Share This Article
Leave a Comment