ಜಾಹೀರಾತು

ಜಾಹೀರಾತು

Kanakagiri: Applications Invited for Anganwadi Worker and Helper Positions
ಕನಕಗಿರಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, ನವೆಂಬರ್ 03, (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದನ್ವಯ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರ ಅನುಮತಿ ಮೇರೆಗೆ ಕನಕಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 2026-27ನೇ ಸಾಲಿನಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 9 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳನ್ನು ಸರ್ಕಾರದ ಆಯ್ಕೆ ಮಾರ್ಗಸೂಚಿಯಂತೆ ಆಫ್ ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು. ಅರ್ಜಿಗಳನ್ನು ನವೆಂಬರ್ 04 ರಿಂದ ಡಿಸೆಂಬರ್ 03 ರ ಸಂಜೆ 05.30 ಗಂಟೆಯೊಳಗೆ ಸಲ್ಲಿಸಬೇಕು. ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Total Views:
0
ಜಾಹೀರಾತು


