ಜಾಹೀರಾತು

ಜಾಹೀರಾತು

Walk-in interview for jobs in Koppal on Nov. 6
ನ. 6ರಂದು ಕೊಪ್ಪಳದಲ್ಲಿ ಉದ್ಯೋಗಕ್ಕಾಗಿ ವಾಕ್ ಇನ್ ಇಂಟರ್ವ್ಯೂ
–
ಕೊಪ್ಪಳ, ನವೆಂಬರ್ 03 (ಕರ್ನಾಟಕ ವಾರ್ತೆ): ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ನವೆಂಬರ್ 06ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೊಮಾ ಹಾಗೂ ಯಾವುದೇ ಪದವಿ, ಬಿ.ಇ. (ಎಲ್ಲಾ ವಿಭಾಗಗಳು) ಮತ್ತು ಬಿ.ಟೆಕ್. (ಎಲ್ಲಾ ವಿಭಾಗಗಳು) ವಿದ್ಯಾರ್ಹತೆ ಹೊಂದಿರುವ 18ರಿಂದ 26 ವರ್ಷ ವಯೋಮಿತಿಯ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ದೃಢೀಕೃತ ಪ್ರಮಾಣಪತ್ರಗಳ ತಲಾ 3 ಪ್ರತಿಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ (ರೆಸ್ಯೂಮ್) ಹಾಗೂ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಮೂಲಕ ಉದ್ಯೋಗಾವಕಾಶದ ನೆರವು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views:
0
ಜಾಹೀರಾತು