

November 16 is the last date for green chili crop insurance.
ಹಸಿ ಮೆಣಸಿನಕಾಯಿ ಬೆಳೆ ವಿಮೆಗೆ ನ. 16 ಕೊನೆಯ ದಿನ

ಕೊಪ್ಪಳ, ನವೆಂಬರ್ 04 (ಕರ್ನಾಟಕ ವಾರ್ತೆ): 2026-27ನೇ ಸಾಲಿನ ಹಿಂಗಾರು ಹಂಗಾಮಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (R-WBCIS) ಅಡಿಯಲ್ಲಿ ಹಸಿ ಮೆಣಸಿನಕಾಯಿ ಬೆಳೆ ಬೆಳೆದ ರೈತರು ಬೆಳೆ ವಿಮೆ ನೋಂದಣಿ ಮಾಡಿಸಲು ನವೆಂಬರ್ 16 ಕೊನೆಯ ದಿನವಾಗಿದೆ ಎಂದು ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ರೈತರು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ, ಖುದ್ದಾಗಿ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ನೊಂದಿಗೆ ಸಮೀಪದ ಗ್ರಾಹಕರ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಇತರೆ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬಹುದು.
ಪ್ರತಿ ಹೆಕ್ಟೇರ್ಗೆ ರೈತರು .ರೂ. 3,550 ವಿಮಾ ಕಂತಿನ ವಂತಿಗೆ ಪಾವತಿಸಬೇಕಾಗುತ್ತದೆ.
ಈ ಯೋಜನೆಯಡಿ ವಿಮಾ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಹಸಿ ಮೆಣಸಿನಕಾಯಿ ಬೆಳೆದಿರಬೇಕು. ಬೆಳೆ ವಿಮಾ ಯೋಜನೆಯ ಅನುಷ್ಠಾನಕ್ಕಾಗಿ ಆಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ಆಯ್ಕೆಯಾಗಿದ್ದು, ರೈತರು ನಿಗದಿತ ದಿನಾಂಕದೊಳಗೆ ವಿಮೆ ನೋಂದಣಿ ಮಾಡಿಸಿಕೊಂಡು ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



