ನವೆಂಬರ್ 7ರಂದು ಕುಷ್ಟಗಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Praja Seva Andolana' meeting in Kushtagi on November 7

ನವೆಂಬರ್ 7ರಂದು ಕುಷ್ಟಗಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಜಾಹೀರಾತು


ಕೊಪ್ಪಳ, ನವೆಂಬರ್ 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ನವೆಂಬರ್ 7ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ಜಿಲ್ಲೆಯ ಕುಷ್ಟಗಿ ನಗರದ ಪಿಸಿಎಚ್ (ಪಕೀರಪ್ಪ ಚನ್ನಪ್ಪ ಹೊಸಹೊಕ್ಕಲ) ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
 ಕೊಪ್ಪಳ ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ನಿರ್ದೇಶನದಂತೆ ತಾಲ್ಲೂಕು ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನ. 7ರ ಶನಿವಾರ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಹಮ್ಮಿಕೊಳ್ಳಲಾಗಿದೆ.
 ಈ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಿಗೆ ಸಂಬಂಧಿಸಿದ ಮನವಿಗಳನ್ನು ಸಲ್ಲಿಸಿ, ಸಭೆಯ ಸದುಪಯೋಗ ಪಡೆದುಕೊಳ್ಳಬೇಕು.
 ಅಲ್ಲದೆ, ತಾಲ್ಲೂಕು ಮಟ್ಟದ ಪ್ರಜಾಸ್ಪಂದನ ಸಭೆಯಲ್ಲಿ ಭಾಗವಹಿಸುವ ಸಂಬಂಧ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಮನವಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****

Total Views: 0
ಜಾಹೀರಾತು
Share This Article
Leave a Comment