ಚಿಂತಾಮಣಿ ನಗರದ ಸಮಗ್ರ ಅಭಿವೃದ್ಧಿಗೆ 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು


Steps taken to construct a new township spanning 850 acres for the comprehensive development of Chintamani city: Minister Dr. Yathindra Siddaramaiah

ಜಾಹೀರಾತು

ಚಿಂತಾಮಣಿ ನಗರದ ಸಮಗ್ರ ಅಭಿವೃದ್ಧಿಗೆ 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಚಿಂತಾಮಣಿ ನಗರದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಯ ಉದ್ದೇಶದಿಂದ ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಂದು ಗೃಹ ಕಚೇರಿಯಲ್ಲಿ ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಉದ್ದೇಶಿತ ಟೌನ್‌ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಈಗಾಗಲೇ ಯೋಜನೆಗೆ ಅಗತ್ಯವಿರುವ ಭೂಮಿಯ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಯೋಜನೆಗೆ ಅಂತಿಮ ರೂಪ ನೀಡಲಾಗಿದೆ. ಯೋಜನೆ ಅನುಷ್ಠಾನಗೊಂಡಲ್ಲಿ ಚಿಂತಾಮಣಿ ನಗರದ ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದ್ದು, ಸಾರ್ವಜನಿಕರಿಗೆ ಸುಸಜ್ಜಿತ ವಸತಿ ವ್ಯವಸ್ಥೆ, ಸುಧಾರಿತ ರಸ್ತೆ ಸಂಪರ್ಕ, ಅಗತ್ಯ ಮೂಲಸೌಕರ್ಯಗಳು ಹಾಗೂ ಉತ್ತಮ ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ ಎಂದರು.

ಯೋಜನೆಗೆ ಅಗತ್ಯವಿರುವ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸಹಕಾರದೊಂದಿಗೆ ನಿಯಮಾನುಸಾರ ಮುಂದಿನ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಚಿಂತಾಮಣಿಯನ್ನು ಸುಸಜ್ಜಿತ ಹಾಗೂ ಯೋಜಿತ ನಗರವನ್ನಾಗಿ ರೂಪಿಸುವುದು, ಭವಿಷ್ಯದ ಜನಸಂಖ್ಯೆ ಮತ್ತು ನಗರೀಕರಣದ ಅಗತ್ಯಗಳಿಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಚಿಂತಾಮಣಿ ಶಾಸಕರಾದ ಡಾ. ಎಂ.ಸಿ. ಸುಧಾಕರ್, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಶ್ರೀನಾಥ್ (ಬಾಬು ರೆಡ್ಡಿ), ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಶ್ರೀ ಶಿವಾನಂದ ಕಪಾಶಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಶ್ರೀ ಪ್ರಭು ಜಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment