ರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಸ್ವಯಂ ಉದ್ಯೋಗ ತರಬೇತಿ: ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು

ರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಸ್ವಯಂ ಉದ್ಯೋಗ ತರಬೇತಿ: ಅರ್ಜಿ ಆಹ್ವಾನ

Free self-employment training for unemployed young men and women: Call for applications

ಜೂಟ್ ಬ್ಯಾಗ್, ಫಾಸ್ಟ್‌ಫುಡ್ ಹಾಗೂ ಅಗರಬತ್ತಿ ತಯಾರಿಕೆ ತರಬೇತಿ – ಊಟ, ವಸತಿ ಉಚಿತ

ಜಾಹೀರಾತು

 

ಕೊಪ್ಪಳ, ನ. 5: ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸ್ಟೇಟ್ ಬ್ಯಾಂಕ್‌ನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಎಸ್‌ಬಿಐ ಆರ್‌ಸೆಟಿ) ವತಿಯಿಂದ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮದಡಿ 13 ದಿನಗಳ ಜೂಟ್ ಬ್ಯಾಗ್ ತಯಾರಿಕೆ, 12 ದಿನಗಳ ಫಾಸ್ಟ್‌ಫುಡ್ ಸ್ಟಾಲ್ ಉದ್ಯಮ ಹಾಗೂ 12 ದಿನಗಳ ಅಗರಬತ್ತಿ ತಯಾರಿಕೆ ತರಬೇತಿ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೌಲಭ್ಯ ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತದೆ.

ನವೆಂಬರ್ 16ರಂದು ಅಭ್ಯರ್ಥಿಗಳ ಸಂದರ್ಶನ ನಡೆಯಲಿದ್ದು, ನವೆಂಬರ್ 17ರಿಂದ ತರಬೇತಿ ಆರಂಭವಾಗಲಿದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು ಅಗತ್ಯ ಮಾರ್ಗದರ್ಶನ ಮತ್ತು ನೆರವು ನೀಡಲಾಗುತ್ತದೆ.

ಅರ್ಹತೆಗಳೇನು?

  • ಅಭ್ಯರ್ಥಿಗಳ ವಯಸ್ಸು 18ರಿಂದ 45 ವರ್ಷಗಳೊಳಗಿರಬೇಕು.

  • ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು.

  • ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿವಾಸಿಗಳಾಗಿರಬೇಕು.

  • ಸ್ವಯಂ ಉದ್ಯೋಗ ಆರಂಭಿಸುವ ಆಸಕ್ತಿ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

ಆಧಾರ್ ಕಾರ್ಡ್, ಪಡಿತರ ಚೀಟಿ, ಪಾನ್ ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್, ವಿದ್ಯಾರ್ಹತೆ ಪ್ರಮಾಣಪತ್ರ ಹಾಗೂ ಮೂರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:

ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೆಟಿ), ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ–583231.

ಹೆಚ್ಚಿನ ಮಾಹಿತಿಗಾಗಿ 08539-231038, 9483618178, 7259073827, 9538096796, 9481085217 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಕೊಪ್ಪಳ ಎಸ್‌ಬಿಐ ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article
Leave a Comment