

Release of the 34th installment of the Gruhalakshmi Scheme: ₹62.81 crore deposited into the accounts of 3.14 lakh beneficiaries in Koppal district. Sweet news for Gruhalakshmi beneficiaries this Deepavali: ₹2,039 crore transferred so far.
ಗೃಹಲಕ್ಷ್ಮೀ ಯೋಜನೆಯ 34ನೇ ಕಂತು ಬಿಡುಗಡೆ: ಕೊಪ್ಪಳ ಜಿಲ್ಲೆಯ 3.14 ಲಕ್ಷ ಫಲಾನುಭವಿಗಖಾತೆಗೆ ₹62.81 ಕೋಟಿ ಜಮಾದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇಲ್ಲಿಯವರೆಗೆ ₹2,039 ಕೋಟಿ ವರ್ಗಾವಣೆ
ಕೊಪ್ಪಳ, ನ.5: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ 2026ನೇ ಸಾಲಿನ ಆಗಸ್ಟ್ ತಿಂಗಳ 34ನೇ ಕಂತಿನ ಹಣವನ್ನು ಕೊಪ್ಪಳ ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಪ್ಪಳ ಜಿಲ್ಲೆಯ ಒಟ್ಟು 3,14,057 ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗಳಿಗೆ ತಲಾ ₹2,000ರಂತೆ ಒಟ್ಟು ₹62,81,14,000 (ಅರವತ್ತೆರಡು ಕೋಟಿ ಎಂಬತ್ತೊಂದು ಲಕ್ಷ ಹದಿನಾಲ್ಕು ಸಾವಿರ ರೂಪಾಯಿ) ಮೊತ್ತವನ್ನು ಡಿ.ಬಿ.ಟಿ. ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಫಲಾನುಭವಿಗಳು ಸರ್ಕಾರದಿಂದ ಬಿಡುಗಡೆಯಾದ ಹಣವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದುವರೆಗೆ ಜಿಲ್ಲೆಯ ಫಲಾನುಭವಿಗಳ ಖಾತೆಗಳಿಗೆ ಒಟ್ಟು ₹2,039 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಕಾಡಾ ಅಧ್ಯಕ್ಷ ಹುಸೇನ್ ಸಾಬ್ ದೋಟಿಹಾಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲೆಯ ಎಲ್ಲ ಫಲಾನುಭವಿಗಳ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಅಲ್ಲದೆ, ಕೊಪ್ಪಳ ಜಿಲ್ಲೆಯ ಎಲ್ಲಾ ಗೃಹಲಕ್ಷ್ಮೀ ಫಲಾನುಭವಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ರೆಡ್ಡಿ ಶ್ರೀನಿವಾಸ ತಿಳಿಸಿದ್ದಾರೆ.
– ಕಲ್ಯಾಣಸಿರಿ ವೆಬ್ ನ್ಯೂಸ್, ಗಂಗಾವತಿ




