ವಿದ್ಯಾರ್ಥಿಗಳು ನಿರಂತರ ಅಧ್ಯಯನ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು

Students should cultivate continuous study, discipline, and human values: DySP J.S. Nyamagoudar




ವಿದ್ಯಾರ್ಥಿಗಳು ನಿರಂತರ ಅಧ್ಯಯನ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್

ಜಾಹೀರಾತು

ಟಿಎಂಎಇ ಶಿಕ್ಷಣ ಮಹಾವಿದ್ಯಾಲಯದ ಗ್ರಂಥಾಲಯ ವೀಕ್ಷಣೆ; ವಿದ್ಯಾರ್ಥಿಗಳಿಗೆ ಉಪಯುಕ್ತ ಸಲಹೆ

ಗಂಗಾವತಿ, ನ.6: ನಗರದ ಟಿಎಂಎಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ.) ಭೇಟಿ ನೀಡಿದ ಗಂಗಾವತಿ ಉಪವಿಭಾಗದ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಅವರು ಕಾಲೇಜಿನ ಗ್ರಂಥಾಲಯವನ್ನು ವೀಕ್ಷಿಸಿ, ಅಲ್ಲಿನ ಪುಸ್ತಕಗಳು, ಶೈಕ್ಷಣಿಕ ಸಂಪನ್ಮೂಲಗಳು ಹಾಗೂ ಗ್ರಂಥಾಲಯದ ವ್ಯವಸ್ಥೆಯನ್ನು ಪರಿಶೀಲಿಸಿದರು.

ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಅವರು, ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಭವಿಷ್ಯವನ್ನು ರೂಪಿಸುವ ಮಹತ್ವದ ಹಂತವಾಗಿದೆ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ಇಟ್ಟುಕೊಂಡು ನಿರಂತರ ಅಧ್ಯಯನ, ಶಿಸ್ತು ಮತ್ತು ಸಮಯಪಾಲನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಶಿಕ್ಷಕರಾಗಲು ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಉತ್ತಮ ಜ್ಞಾನ, ವ್ಯಕ್ತಿತ್ವ ಹಾಗೂ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಂಥಾಲಯವು ಜ್ಞಾನದ ಭಂಡಾರವಾಗಿದ್ದು, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಓದಿಗೆ ಸೀಮಿತವಾಗದೆ ದಿನಪತ್ರಿಕೆಗಳು, ಕಥೆ, ಕಾದಂಬರಿ, ಜೀವನಚರಿತ್ರೆ ಹಾಗೂ ಮಹನೀಯರ ಸಾಧನೆಗಳ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಓದುವ ಹವ್ಯಾಸದಿಂದ ಸಾಮಾನ್ಯ ಜ್ಞಾನ, ಭಾಷಾ ಕೌಶಲ್ಯ, ಆತ್ಮವಿಶ್ವಾಸ ಹಾಗೂ ಚಿಂತನಾ ಸಾಮರ್ಥ್ಯ ಹೆಚ್ಚಾಗುತ್ತದೆ. ಪ್ರತಿದಿನ ಸ್ವಲ್ಪ ಸಮಯವನ್ನಾದರೂ ಗ್ರಂಥಾಲಯದಲ್ಲಿ ಕಳೆಯುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಮೊಬೈಲ್‌ಗೆ ಹೆಚ್ಚು ಸಮಯ ವ್ಯಯಿಸದೆ ಅದನ್ನು ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಮಯದ ಸದುಪಯೋಗ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧತೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜದ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯಾಗಿದೆ. ಒಬ್ಬ ಉತ್ತಮ ಶಿಕ್ಷಕ ತನ್ನ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಶಿಸ್ತು, ಮಾನವೀಯತೆ, ನೈತಿಕ ಮೌಲ್ಯಗಳು, ದೇಶಪ್ರೇಮ ಹಾಗೂ ಸಾಮಾಜಿಕ ಕಾಳಜಿಯನ್ನು ಕಲಿಸಬೇಕು. ಆದ್ದರಿಂದ ಭವಿಷ್ಯದ ಶಿಕ್ಷಕರು ತಾವು ಮೊದಲು ಉತ್ತಮ ವ್ಯಕ್ತಿಗಳಾಗಿ ರೂಪುಗೊಂಡು ಸಮಾಜಕ್ಕೆ ಆದರ್ಶವಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಟಿಎಂಎಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಕೆ.ಸಿ. ಕುಲಕರ್ಣಿ, ಗಂಗಾವತಿ ಉಪವಿಭಾಗ ಆಸ್ಪತ್ರೆಯ ತಜ್ಞ ವೈದ್ಯ ಡಾ.ಸೋಮಶೇಖರ್, ಸರ್ಕಾರಿ ಆಸ್ಪತ್ರೆಯ ಐಸಿಟಿಸಿ ವಿಭಾಗದ ಶಿವಾನಂದ ನಾಯ್ಕರ್, ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕ ಯಮನೂರಪ್ಪ ಬಜೇಂತ್ರಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment