ನಶಾಮುಕ್ತ ಯುವಜನತೆ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು


Students should join hands to build a drug-free youth generation

ಜಾಹೀರಾತು
ಜಾಹೀರಾತು

ನಶಾಮುಕ್ತ ಯುವಜನತೆ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕು

ಮಾದಕ ವಸ್ತುಗಳ ವ್ಯಸನದಿಂದ ಯುವಜನರ ಭವಿಷ್ಯ ಹಾಳು: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್

ಗಂಗಾವತಿ, ನ.6: ನಗರದ ಟಿ.ಎಂ.ಎ.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.)ದಲ್ಲಿ ಯುವಜನರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ನಶಾಮುಕ್ತ ಯುವ ಅಭಿಯಾನ ಹಾಗೂ ವಿಕಸಿತ ಭಾರತ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಂಗಾವತಿ ಉಪವಿಭಾಗದ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಅವರು, ಇಂದಿನ ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಯುವಕರು ದುಶ್ಚಟಗಳಿಂದ ದೂರವಿದ್ದು, ಶಿಕ್ಷಣ, ಕ್ರೀಡೆ, ಸಾಹಿತ್ಯ ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಜಾಗೃತಿ ಹೊಂದುವುದರ ಜೊತೆಗೆ ತಮ್ಮ ಸ್ನೇಹಿತರು ಹಾಗೂ ಸುತ್ತಮುತ್ತಲಿನ ಜನರಲ್ಲಿಯೂ ಅರಿವು ಮೂಡಿಸಬೇಕು. ನಶಾಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬ ಯುವಕ-ಯುವತಿಯರ ಪಾತ್ರ ಮಹತ್ವದ್ದಾಗಿದೆ. ದೇಶದ ಅಭಿವೃದ್ಧಿಗೆ ಆರೋಗ್ಯವಂತ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಯುವಶಕ್ತಿ ಅಗತ್ಯ ಎಂದು ತಿಳಿಸಿದರು.

ನಂತರ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸೋಮಶೇಖರ ಅವರು ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಮೆದುಳು, ಹೃದಯ, ಯಕೃತ್ತು ಸೇರಿದಂತೆ ದೇಹದ ಪ್ರಮುಖ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಆರಂಭದಲ್ಲಿ ಕುತೂಹಲ ಅಥವಾ ಸ್ನೇಹಿತರ ಒತ್ತಾಯಕ್ಕೆ ಒಳಗಾಗಿ ಸೇವನೆ ಆರಂಭಿಸುವ ಯುವಕರು ಕ್ರಮೇಣ ವ್ಯಸನಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಇದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಹದಗೆಡುತ್ತದೆ ಎಂದು ಹೇಳಿದರು.

ಮಾದಕ ವಸ್ತುಗಳ ವ್ಯಸನದಿಂದ ಹೊರಬರಲು ವೈದ್ಯಕೀಯ ಚಿಕಿತ್ಸೆ, ಕುಟುಂಬದ ಬೆಂಬಲ ಹಾಗೂ ಸೂಕ್ತ ಸಮಾಲೋಚನೆ ಅಗತ್ಯ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ಯಾವುದೇ ರೀತಿಯ ವ್ಯಸನದ ಲಕ್ಷಣ ಕಂಡುಬಂದಲ್ಲಿ ಮುಚ್ಚಿಡದೆ ವೈದ್ಯರ ಸಲಹೆ ಪಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಟಿಎಂಎಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಕೆ.ಸಿ. ಕುಲಕರ್ಣಿ, ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಯಾತನೂರು, ಸರ್ಕಾರಿ ಆಸ್ಪತ್ರೆಯ ಐಸಿಟಿಸಿ ವಿಭಾಗದ ಶಿವಾನಂದ ನಾಯ್ಕರ್, ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕ ಯಮನೂರಪ್ಪ ಬಜೇಂತ್ರಿ,ಕಸಾಪ ತಾಲ್ಲೂಕು ಅಧ್ಯಕ್ಷ ರುದ್ರೇಶ ಆರಾಳ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು

Total Views: 0
ಜಾಹೀರಾತು
Share This Article
Leave a Comment