ಸೆಂಟ್ ಪೌಲ್ಸ್ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಅಥರ್ವ -2026ರ ಸಂಭ್ರಮ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Celebrations of 'Atharva-2026' at St. Paul's College on the occasion of the 71st Kannada Rajyotsava

ಸೆಂಟ್ ಪೌಲ್ಸ್ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಅಥರ್ವ -2026ರ ಸಂಭ್ರಮ

ಜಾಹೀರಾತು
ಜಾಹೀರಾತು

ಬೆಂಗಳೂರು: ನ.07: ನಗರದ ಸೆಂಟ್ ಪೌಲ್ಸ್ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಿರ್ದೇಶಕ ಡಾ. ಟಿ. ಎಸ್. ನಾಗಾಭರಣ ಅವರು ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಶ್ರೀಮಂತ ಪರಂಪರೆಯನ್ನು ಸ್ಮರಿಸಿದರು. ಕನ್ನಡ ಭಾಷೆಯ ಉಳಿವು ಹಾಗೂ ಬೆಳವಣಿಗೆಯಲ್ಲಿ ಯುವ ಜನತೆಯ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರೊಂದಿಗೆ ನಾಡಿನ ಕಲೆ, ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಮಾತನಾಡಿ, ಪ್ರಾಂಶುಪಾಲರಾದ ಡಾ.ಥಾಮಸ್ ಎಂ. ಜೆ. ಅವರು ಕನ್ನಡ ನಾಡು-ನುಡಿಯ ಮಹತ್ವವನ್ನು ತಿಳಿಸಿ, ಭಾಷಾ ವೈವಿಧ್ಯತೆಯ ನಡುವೆ ಕನ್ನಡ ಭಾಷೆಯ ಗೌರವ ಮತ್ತು ಅಸ್ಮಿತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕನ್ನಡ ಗೀತೆಗಳು, ನೃತ್ಯ, ಭಾಷಣ ಹಾಗೂ ಕಲಾ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.

ಇದೇ ವೇಳೆ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ತೃಪ್ತಿ ಶರ್ಮ, ಸಂಯೋಜಕರಾದ ಕನ್ನಡ ಅಧ್ಯಾಪಕರಾದ ಸಾವಿತ್ರಿ. ಸಿ, ಡಾ. ಉಮೇಶ್ ನಾಯ್ಕ್ ಎನ್, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

__________________________________________  
ಕನ್ನಡ ರಾಜ್ಯೋತ್ಸವ ಅಂಗವಾಗಿ ಅಥರ್ವ -2026ರ ಸಂಭ್ರಮದಲ್ಲಿ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕನ್ನಡ ಗೀತೆಗಳು, ನೃತ್ಯ, ಭಾಷಣ, ಕಲಾ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು.

Total Views: 0
ಜಾಹೀರಾತು
Share This Article
Leave a Comment