ಜಾಹೀರಾತು

Veeravanite Onake Obavva Jayanti in Koppal on November 11
ನವೆಂಬರ್ 11ರಂದು ಕೊಪ್ಪಳದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ
ಜಾಹೀರಾತು

ಕೊಪ್ಪಳ, ನವೆಂಬರ್ 09 : ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ‘ವೀರವನಿತೆ ಒನಕೆ ಓಬವ್ವ’ ಜಯಂತಿಯನ್ನು ನವೆಂಬರ್ 11ರಂದು ಹಮ್ಮಿಕೊಳ್ಳಲಾಗಿದೆ.
ಎಲ್ಲಾ ಇಲಾಖೆಗಳು ತಮ್ಮ ಕಚೇರಿಗಳಲ್ಲಿ ಹಾಗೂ ತಮ್ಮ ಅಧೀನ ಕಚೇರಿಗಳಲ್ಲಿ ಅಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಆಚರಿಸಬೇಕು. ಅಲ್ಲದೆ, ನ. 11ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜಯಂತಿ ಪೂಜಾ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಸರಿಯಾದ ಸಮಯಕ್ಕೆ ಹಾಜರಾಗಬೇಕು ಹಾಗೂ ಸಮಾಜದ ಮುಖಂಡರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು



