ಶ್ರೀ ಕಾರ್ಗಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಗುದ್ದಲಿ ಪೂಜೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Minister Dr. Yathindra Siddaramaiah performs the groundbreaking ceremony (*guddali pooja*) for the renovation of the Sri Kargalli Mahalakshmi Temple.




ಶ್ರೀ ಕಾರ್ಗಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಗುದ್ದಲಿ ಪೂಜೆ

ಜಾಹೀರಾತು
ಜಾಹೀರಾತು

ಮೈಸೂರು: ನಗರದ ಎಸ್. ಉತ್ತನಹಳ್ಳಿ ಸಮೀಪದ ಏಳಿಗೆಹುಂಡಿಯಲ್ಲಿರುವ ಶ್ರೀ ಕಾರ್ಗಳ್ಳಿ ಮಹಾಲಕ್ಷ್ಮಿ ದೇವಿ ದೇವಸ್ಥಾನದ ಪುನರ್ ಜೀರ್ಣೋದ್ಧಾರ ಕಾಮಗಾರಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಸಂಜೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆದ ಸಚಿವರು, ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿ ಕರುಣಿಸುವಂತೆ ಪ್ರಾರ್ಥಿಸಿದರು.
ದೇವಿಯ ಕೃಪಾಶೀರ್ವಾದದಿಂದ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲ್ಯಾಣಸಿರಿ ಕನ್ನಡ ದಿನಪತ್ರಿಕೆ ಹಾಗೂ ವೆಬ್ ನ್ಯೂಸ್, ಗಂಗಾವತಿ

Total Views: 0
ಜಾಹೀರಾತು
Share This Article
Leave a Comment