ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ರಾಮಲಿಂಗಪ್ಪ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

National Education Day: State-level 'Best Principal' award for Ramalingappa





ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ರಾಮಲಿಂಗಪ್ಪ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

ಜಾಹೀರಾತು
ಜಾಹೀರಾತು


ಗಂಗಾವತಿ: ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆ ಹಾಗೂ ಕಾರ್ಯನಿರ್ವಹಣೆಯನ್ನು ಗುರುತಿಸಿ, ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯ ಪ್ರಾಂಶುಪಾಲರಾದ ರಾಮಲಿಂಗಪ್ಪ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದ ಕಚೇರಿಯಲ್ಲಿ ನವೆಂಬರ್ 11ರಂದು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದೇಶದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸ್ಮರಣಾರ್ಥ ಪ್ರತಿವರ್ಷ ನವೆಂಬರ್ 11ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರಾಂಶುಪಾಲರನ್ನು ಗುರುತಿಸಿ ಗೌರವಿಸಲಾಯಿತು. ಈ ಪೈಕಿ ಹಿರೇಬೆಣಕಲ್ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯ ಪ್ರಾಂಶುಪಾಲ ರಾಮಲಿಂಗಪ್ಪ ಅವರ ಶೈಕ್ಷಣಿಕ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಉತ್ತಮ ಆಡಳಿತ ನಿರ್ವಹಣೆಯನ್ನು ಪರಿಗಣಿಸಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಸಚಿವರಾದ ಯು.ಟಿ. ಖಾದರ್ ಅವರು ರಾಮಲಿಂಗಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.

ಗಂಗಾವತಿ ತಾಲೂಕಿಗೆ ಹೆಮ್ಮೆ:

ರಾಮಲಿಂಗಪ್ಪ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ ಲಭಿಸಿರುವುದು ಗಂಗಾವತಿ ತಾಲೂಕು ಹಾಗೂ ಹಿರೇಬೆಣಕಲ್ ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆಗೆ ಶಿಕ್ಷಣಾಸಕ್ತರು, ಶಿಕ್ಷಕ ವೃಂದ, ಗ್ರಾಮಸ್ಥರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Total Views: 0
ಜಾಹೀರಾತು
Share This Article
Leave a Comment