
Applications invited for a 13-day comprehensive training program for agri-entrepreneurs
13 ದಿನಗಳ ಸಮಗ್ರ ಕೃಷಿ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ, ನವೆಂಬರ್ 12 : ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹಳಿಯಾಳದಲ್ಲಿ 18 ರಿಂದ 50 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತ ಮಹಿಳೆಯರು ಮತ್ತು ಪುರುಷರಿಗಾಗಿ 13 ದಿನಗಳ “ಸಮಗ್ರ ಕೃಷಿ ಉದ್ಯಮಿ” ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿಸೆಂಬರ್ 10 ರಿಂದ ಆರಂಭವಾಗುವ ಈ ತರಬೇತಿಯಲ್ಲಿ ತರಬೇತಿ ಅವಧಿಯಲ್ಲಿ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕೆ ಹಾಗೂ ಸಮಗ್ರ ಕೃಷಿ ಪದ್ಧತಿಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಪಶುಗಳ ಆರೈಕೆ, ಆಹಾರ ನಿರ್ವಹಣೆ, ಆರೋಗ್ಯ ಸಂರಕ್ಷಣೆ, ಕೃಷಿ ಚಟುವಟಿಕೆಗಳ ಯೋಜನೆ ಮತ್ತು ಕೃಷಿ ಆಧಾರಿತ ಸಣ್ಣ ಉದ್ಯಮ ಆರಂಭಿಸುವ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.
ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಸ್ವಯಂ ಉದ್ಯೋಗ ಆರಂಭಿಸಲು ಬ್ಯಾಂಕ್ಗಳ ಮೂಲಕ ಸಾಲ ಸೌಲಭ್ಯ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಾಗುತ್ತದೆ.
ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಕೃಷಿ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವವರು ತಮ್ಮ ಹೆಸರು, ವಿಳಾಸ ಹಾಗೂ ಸಂಪರ್ಕ ವಿವರಗಳನ್ನು ನೋಂದಾಯಿಸಿಕೊಳ್ಳಲು ವಿನಂತಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದರ ಫೋಟೋ ತೆಗೆದು ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಕರೆ ಮಾಡಿ ಹೆಸರು ನೋಂದಣಿ ಮಾಡಿಸಬಹುದು. ಅರ್ಜಿ ಸಲ್ಲಿಸಲು ವೆಬ್ಸೈಟ್ www.rsetihaliyal.org ಅಥವಾ https://forms.gle/YH3dDNvtinh8zpvEA, ಮತ್ತು CBD RSETI Hliyal ವಾಟ್ಸ್ ಆ್ಯಪ್ ಚಾನಲ್ ನಲ್ಲಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಮೊ.ಸಂ: 9483485489 ಗೆ ಕೃಷಿ ಉದ್ಯಮಿ ಎಂದು ಸಂದೇಶ ಕಳಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 8970145354 ಅಥವಾ 9483485489 ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



