ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೊಪ್ಪಳ ಸರ್ಕಾರಿ ಮಹಿಳಾ ಕಾಲೇಜಿಗೆ ದ್ವಿತೀಯ ಸ್ಥಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Second place for Koppal Government Women's College in throwball tournament




ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೊಪ್ಪಳ ಸರ್ಕಾರಿ ಮಹಿಳಾ ಕಾಲೇಜಿಗೆ ದ್ವಿತೀಯ ಸ್ಥಾನ

ಜಾಹೀರಾತು
ಜಾಹೀರಾತು

ಲಿಂಗಸೂಗೂರು: ರಾಜ್ಯಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ಸಾಧನೆ

ಕೊಪ್ಪಳ: ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಇತ್ತೀಚೆಗೆ ನಡೆದ 2026-27ನೇ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನದ ಪಾರಿತೋಷಕದೊಂದಿಗೆ ಕಾಲೇಜಿಗೆ ಮರಳಿದ್ದು, ಕಾಲೇಜಿನ ಪ್ರಾಚಾರ್ಯರು ಹಾಗೂ ಸಮಸ್ತ ಸಿಬ್ಬಂದಿ ಅವರನ್ನು ಅಭಿನಂದಿಸಿ, ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಪಟುಗಳಾದ ಸಾವಿತ್ರಿ, ಬನಿಯಾ, ರಕ್ಷಿತಾ, ಸಾವಿತ್ರಿ ತಳವಾರ್, ಸಂಗೀತಾ, ಶಶಿಕಲಾ, ಶ್ರೀದೇವಿ, ಮಂಜುಳಾ, ಅಕ್ಷತಾ ಹಾಗೂ ರಂಜಿತಾ, ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ನಿರ್ದೇಶಕ ಶಂಕರ ನಾಯ್ಕ್, ಪ್ರಾಚಾರ್ಯ ಡಾ. ಗಣಪತಿ ಕೆ. ಲಮಾಣಿ, ಐಕ್ಯೂಎಸಿ ಸಂಯೋಜಕಿ ಡಾ. ಶುಭಾ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಬಸವರಾಜ ಕರುಗಲ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment