ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Achievements of female students from the Government Junior College in cultural competitions

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

ಐವರು ವಿದ್ಯಾರ್ಥಿನಿಯರು ವಿಭಾಗ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆ

ಗಂಗಾವತಿ: ನಗರದ ಎಂ.ಎನ್.ಎಂ. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 13ರಂದು ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಂಗಾವತಿಯ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಜಾಹೀರಾತು
ಜಾಹೀರಾತು

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿನಿಯರು ಬಹುಮಾನಗಳನ್ನು ಪಡೆದು ಕಲಬುರಗಿಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆ ಹೀಗಿದೆ:

  • ಜಾನಪದ ನೃತ್ಯ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ ದ್ವಿತೀಯ ಸ್ಥಾನ.
  • ಜಾನಪದ ಗಾಯನ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗೀತಮ್ಮ ದ್ವಿತೀಯ ಸ್ಥಾನ.
  • ರಸಪ್ರಶ್ನೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಸಂಜನಾ ಮತ್ತು ಅಂಕಿತ ತೃತೀಯ ಸ್ಥಾನ.
  • ಭಾವಗೀತೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೀದೇವಿ ತೃತೀಯ ಸ್ಥಾನ.
  • ಕನ್ನಡ ಚರ್ಚಾ ಸ್ಪರ್ಧೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಂಕಿತಾ ತೃತೀಯ ಸ್ಥಾನ.

ವಿಭಾಗ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಬಸಪ್ಪ ನಾಗೋಲಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀದೇವಿ ಮತ್ತು ಶ್ರೀಮತಿ ಸಾವಿತ್ರಿ, ಹಿರಿಯ ಉಪನ್ಯಾಸಕರಾದ ಡಾ. ಲಿಂಗಣ್ಣ ಜಂಗಮರಳ್ಳಿ, ಅಜಗರ, ಅಜಗರ ಪಾಷಾ, ಶ್ರೀಮತಿ ರಮಾ, ಗ್ರಂಥಪಾಲಕ ರಮೇಶ ಗಬ್ಬೂರ್ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ.

– ಬಸಪ್ಪ ನಾಗೋಲಿ, ಪ್ರಾಚಾರ್ಯರು, ಸರ್ಕಾರಿ ಜೂನಿಯರ್ ಕಾಲೇಜು, ಗಂಗಾವತಿ.

Total Views: 0
ಜಾಹೀರಾತು
Share This Article
Leave a Comment