ರಾಜ್ಯ ಸಂಘದ ನಿಲುವಿಗೆ ಕೊಪ್ಪಳ ಜಿಲ್ಲಾ ಘಟಕ ಬದ್ಧ: ಸುರೇಶ ಚಲವಾದಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Koppal District Unit Committed to State Association's Stance: Suresh Chalavadi

ರಾಜ್ಯ ಸಂಘದ ನಿಲುವಿಗೆ ಕೊಪ್ಪಳ ಜಿಲ್ಲಾ ಘಟಕ ಬದ್ಧ: ಸುರೇಶ ಚಲವಾದಿ

ಜಾಹೀರಾತು
ಜಾಹೀರಾತು


ಕಲಬುರಗಿ ಕಾರ್ಯಕ್ರಮಕ್ಕೆ ರಾಜ್ಯ ಸಂಘದ ಬೆಂಬಲವಿಲ್ಲ; ಪಂಚಾಯಿತಿಗಳ ಆರ್ಥಿಕ ಸಂಕಷ್ಟ ಮತ್ತು ಪಿಡಿಒಗಳ ಸೇವಾ ಬೇಡಿಕೆಗಳ ಈಡೇರಿಕೆಗೆ ಆದ್ಯತೆ


ಕೊಪ್ಪಳ: ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವು ಕಲಬುರಗಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಸಂಘದ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚಲವಾದಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ರಾಜ್ಯ ಸಂಘದೊಂದಿಗೆ ಯಾವುದೇ ಚರ್ಚೆ ಅಥವಾ ಸಮಾಲೋಚನೆ ನಡೆದಿಲ್ಲ. ಅಲ್ಲದೆ, ಸದರಿ ಕಾರ್ಯಕ್ರಮಕ್ಕೆ ಬೆಂಬಲ ನೀಡದಿರಲು ರಾಜ್ಯ ಸಂಘ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸುವುದು, ಪಂಚಾಯಿತಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿಸುವುದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಹಾಗೂ ಇತರ ಸೇವಾ ಸಂಬಂಧಿತ ಬೇಡಿಕೆಗಳನ್ನು ಈಡೇರಿಸುವುದೇ ಸಂಘದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

Total Views: 0
ಜಾಹೀರಾತು
Share This Article
Leave a Comment