ಕಾನೂನುಬದ್ಧ ದತ್ತು ಸ್ವೀಕಾರವೇ ಮಕ್ಕಳನ್ನು ಪಡೆಯಲು ಸರಿಯಾದ ಮಾರ್ಗ: ಸಿಂಧು ಅಂಗಡಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Legal adoption is the right way to have children: Sindhu Angadi




ಕಾನೂನುಬದ್ಧ ದತ್ತು ಸ್ವೀಕಾರವೇ ಮಕ್ಕಳನ್ನು ಪಡೆಯಲು ಸರಿಯಾದ ಮಾರ್ಗ: ಸಿಂಧು ಅಂಗಡಿ

ಜಾಹೀರಾತು
ಜಾಹೀರಾತು


ಕೊಪ್ಪಳ, ನವೆಂಬರ್ 13 : ಪೋಷಕರಾಗಲು ಅಡ್ಡದಾರಿಗಳಿಲ್ಲ, ಕಾನೂನುಬದ್ಧ ದತ್ತು ಸ್ವೀಕಾರವೇ ಒಂದೇ ಸರಿಯಾದ ಮಾರ್ಗವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ ಅವರು ಹೇಳಿದರು.
ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರ (ನ. 13ರಂದು) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನವೆಂಬರ್ ತಿಂಗಳನ್ನು ರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, 2026ರ ಸಾಲಿನಲ್ಲಿ “ಪೋಷಕರಾಗಲು ಅಡ್ಡದಾರಿಗಳಿಲ್ಲ ಕಾನೂನುಬದ್ಧ ದತ್ತು ಸ್ವೀಕಾರ ಒಂದೇ ಸರಿಯಾದ ಮಾರ್ಗ” ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ ತಿದ್ದುಪಡಿ-2021ರ ಕಲಂ 81ರ ಪ್ರಕಾರ ಮಕ್ಕಳನ್ನು ಮಾರಾಟ ಮಾಡುವುದು ಅಥವಾ ಖರೀದಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಕೃತ್ಯ ಎಸಗಿದವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಈ ಕೃತ್ಯದಲ್ಲಿ ಭಾಗಿಯಾಗುವ ಆಸ್ಪತ್ರೆ, ನರ್ಸಿಂಗ್ ಹೋಂ ಮತ್ತು ಹೆರಿಗೆ ಆಸ್ಪತ್ರೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೂರು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಬಳಿಕ ಕಾನೂನುಬದ್ಧ ದತ್ತು ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ದತ್ತು ಸಂಕಲ್ಪ ಸಂದೇಶವನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್, ಉಪಕಾರ್ಯದರ್ಶಿ ಬಸವರಾಜ್, ಅಕ್ಕಪಡೆಯ ಸಿಬ್ಬಂದಿ, ದೇವಸ್ಥಾನದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment