ನ.17 ಮತ್ತು 18ರಂದು ಶ್ರೀರಾಮನಗರದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು


Koppal University Inter-Collegiate Men’s Volleyball Tournament to be held in Sriramanagara on Nov 17 and 18

ನ.17 ಮತ್ತು 18ರಂದು ಶ್ರೀರಾಮನಗರದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿ

ಜಾಹೀರಾತು
ಜಾಹೀರಾತು


ವಿಶ್ವವಿದ್ಯಾಲಯ ತಂಡದ ಆಯ್ಕೆ ಪಂದ್ಯಾವಳಿಯೂ ಆಯೋಜನೆ; ಸಚಿವ ಶಿವರಾಜ ಎಸ್. ತಂಗಡಗಿ ಉದ್ಘಾಟನೆ


ಶ್ರೀರಾಮನಗರ: ಕೊಪ್ಪಳ ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷರ ವಾಲಿಬಾಲ್ ಕ್ರೀಡಾಕೂಟ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಪುರುಷರ ವಾಲಿಬಾಲ್ ತಂಡದ ಆಯ್ಕೆ ಪಂದ್ಯಾವಳಿಗಳು ನವೆಂಬರ್ 17 ಮತ್ತು 18ರಂದು ಶ್ರೀರಾಮನಗರದ ಚಿಲುಕೂರಿ ನಾಗೇಶ್ವರ ರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿವೆ.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ರಾಜಶೇಖರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರು ಹಾಗೂ ಶಿಕ್ಷಕರ ಕ್ಷೇತ್ರದ ಪ್ರತಿನಿಧಿ ಶಶಿಲ್ ಜಿ. ನಮೋಶಿ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ವಿ. ವಾರುಣಿ, ಕುಲಸಚಿವರು (ಆಡಳಿತ) ಪ್ರೊ. ಎಸ್.ಟಿ. ಬಾಗಲಕೋಟೆ, ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ್, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ. ಮಂಜುನಾಥ ಆರೆಂಟನೂರು ಹಾಗೂ ಕಾಲೇಜಿನ ಭೂದಾನಿಗಳಾದ ಚಿಲುಕೂರಿ ವೆಂಕಟರಾಮಕೃಷ್ಣ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಶ್ರೀರಾಮನಗರ ಗ್ರಾಮದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲ ಮಹಾವಿದ್ಯಾಲಯಗಳ ಪುರುಷರ ವಾಲಿಬಾಲ್ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ. ಕ್ರೀಡಾಕೂಟದ ಮೂಲಕ ಪ್ರತಿಭಾವಂತ ಆಟಗಾರರನ್ನು ಗುರುತಿಸಿ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆ ಮಾಡಲಾಗುವುದು.
ಕ್ರೀಡಾಕೂಟದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಕ್ರೀಡಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಪಟ್ಸುಗಳಿಗೆ ಪ್ರೋತ್ಸಾಹ ನೀಡಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಗೂಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article
Leave a Comment