ಜಾಹೀರಾತು

Praja Seva Andolana' meeting in Venkatagiri on Nov 21
ನ.21 ರಂದು ವೆಂಕಟಗಿರಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆ
ಕೊಪ್ಪಳ, ನವೆಂಬರ್ 19: ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಗಂಗಾವತಿ ತಾಲೂಕಿನ ವೆಂಕಟಗಿರಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ನವೆಂಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ವೆಂಕಟಗಿರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಹಾಗೂ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗಂಗಾವತಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0


