ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಹೇಳಿಕೆ ಖಂಡಿಸಿ ನಾಳೆ ಕೊಪ್ಪಳದಲ್ಲಿ ಬಸವಪರ ಸಂಘಟನೆಗಳ ಪ್ರತಿಭಟನಾ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Pro-Basava organizations to protest in Koppal tomorrow, condemning statements that tarnish Basavanna's personality





ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತರುವ ಹೇಳಿಕೆ ಖಂಡಿಸಿ ನಾಳೆ ಕೊಪ್ಪಳದಲ್ಲಿ ಬಸವಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿ

ಜಾಹೀರಾತು


ರವಿ ಹಂಜ್, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ಸಲ್ಲಿಕೆ


ಕೊಪ್ಪಳ: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತರುವ ರೀತಿಯಲ್ಲಿ ವಿಶ್ವವಾಣಿ ಸ್ಪೆಷಲ್ ಯೂಟ್ಯೂಬ್ ಚಾನೆಲ್‌ನ ಸಂದರ್ಶನದಲ್ಲಿ ಮಾತನಾಡಿದ್ದಾರೆ ಎನ್ನಲಾದ ಅನಿವಾಸಿ ಭಾರತೀಯ ರವಿ ಹಂಜ್ ಅವರ ಹೇಳಿಕೆಯನ್ನು ಖಂಡಿಸಿ, ನವೆಂಬರ್ 20ರಂದು ಶುಕ್ರವಾರ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜಿಲ್ಲೆಯ ಬಸವಪರ ಸಂಘಟನೆಗಳ ವತಿಯಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಯಲಬುರ್ಗಾ ತಾಲೂಕಿನ ಎಲ್ಲಾ ಬಸವಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಾಷ್ಟ್ರೀಯ ಬಸವ ದಳದ ಬಸವರಾಜ ಹೂಗಾರ ಮನವಿ ಮಾಡಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ, ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾದ ರವಿ ಹಂಜ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದು.
ನಂತರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ರವಿ ಹಂಜ್ ರಚಿಸಿದ್ದಾರೆ ಎನ್ನಲಾದ ‘ಬಸವ ಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಈ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಮತ್ತು ರವಿ ಹಂಜ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಲಿದ್ದಾರೆ.
ರ್ಯಾಲಿಯ ಬಳಿಕ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ಬಸವಣ್ಣನವರ ತತ್ವ, ವಿಚಾರ, ವಚನ ಸಾಹಿತ್ಯ ಮತ್ತು ಶರಣ ಪರಂಪರೆಯ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಬಸವಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಬಸವಾಭಿಮಾನಿಗಳು ಈ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಬಸವರಾಜ ಹೂಗಾರ, ರಾಷ್ಟ್ರೀಯ ಬಸವ ದಳ, ಶರಣ ಗ್ರಾಮ ಗುಳೆ ಅವರು ವಿನಂತಿಸಿದ್ದಾರೆ.

Total Views: 0
Share This Article
Leave a Comment