
Sharanabasappa Dhanakai has been selected for a second term as State Director of the SDMC Coordination Center.

ಗಂಗಾವತಿಯಲ್ಲಿ ನ.21ರಂದು ಸಂಗೀತ ಸಂಭ್ರಮ
ಸಪ್ತಸ್ವರ ಸಾಂಸ್ಕೃತಿಕ ಕಲಾ ಸಂಘ ಹಾಗೂ ಫ್ರೆಂಡ್ಸ್ ಯೋಗ ಗ್ರೂಪ್ನಿಂದ ಆಯೋಜನೆ
ಗಂಗಾವತಿ: ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಕಲಾ ಪರಂಪರೆಯನ್ನು ಉಳಿಸಿ ಬೆಳೆಸುವ ಆಶಯದೊಂದಿಗೆ ನಗರದ ಸಪ್ತಸ್ವರ ಸಾಂಸ್ಕೃತಿಕ ಕಲಾ ಸಂಘ (ರಿ) ಹಾಗೂ ಫ್ರೆಂಡ್ಸ್ ಯೋಗ ಗ್ರೂಪ್ ವತಿಯಿಂದ ನವೆಂಬರ್ 21ರ ಶನಿವಾರ ಸಂಜೆ 5 ಗಂಟೆಗೆ ನಗರದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದು, ಕಲಾಸಕ್ತರನ್ನು ಒಂದೆಡೆ ಸೇರಿಸುವುದು ಹಾಗೂ ಸಾರ್ವಜನಿಕರಲ್ಲಿ ಸಂಗೀತಾಭಿರುಚಿ ಮತ್ತು ಸಾಂಸ್ಕೃತಿಕ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಗಂಗಾವತಿಯ ವಿವಿಧ ಕ್ಷೇತ್ರಗಳ ಗಣ್ಯರು, ಜನಪ್ರತಿನಿಧಿಗಳು, ಸಹಕಾರ ಕ್ಷೇತ್ರದ ಮುಖಂಡರು, ಶಿಕ್ಷಣ ತಜ್ಞರು, ಸಮಾಜಸೇವಕರು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ.
ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿರಲಿದ್ದು, ಸಂಗೀತಾಸಕ್ತರು, ಕಲಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಗೀತ ಸಂಭ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರಾದ ಆರ್. ಕಣ್ಣನ್ ಅವರು ಮನವಿ ಮಾಡಿದ್ದಾರೆ.


