ವಿಜೃಂಭಣೆಯಿಂದ ಜರುಗಿದ ಶ್ರೀ ಮೌನೇಶ್ವರ ದೇವಸ್ಥಾನದ 13ನೇ ವಾರ್ಷಿಕೋತ್ಸವ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

13th Anniversary of Sri Mouneshwara Temple Celebrated with Great Grandeur




ವಿಜೃಂಭಣೆಯಿಂದ ಜರುಗಿದ ಶ್ರೀ ಮೌನೇಶ್ವರ ದೇವಸ್ಥಾನದ 13ನೇ ವಾರ್ಷಿಕೋತ್ಸವ

ಜಾಹೀರಾತು



ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀ ವಿರಾಟ ವಿಶ್ವಕರ್ಮ, ಶ್ರೀ ಮೌನೇಶ್ವರ ಹಾಗೂ ಶ್ರೀ ಗಾಯತ್ರಿದೇವಿ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆಯ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನವೆಂಬರ್ 20ರ ಶುಕ್ರವಾರದಂದು ಭಕ್ತಿಭಾವ ಮತ್ತು ಸಂಭ್ರಮದಿಂದ ವಿಜೃಂಭಣೆಯಿಂದ ನೆರವೇರಿತು.
ವಾರ್ಷಿಕೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜಾ ವಿಧಿವಿಧಾನಗಳು, ಹೋಮ-ಹವನ ಸೇರಿದಂತೆ ಹಲವು ಧಾರ್ಮಿಕ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು. ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ನೂರಾರು ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಗಂಗಾವತಿಯ ಶ್ರೀ ವಿಶ್ವಕರ್ಮ ಸಂಘ ದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು, ಶ್ರೀ ಮೌನೇಶ್ವರ ದೇವಸ್ಥಾನದ ಆಡಳಿತ ಮಂಡಳಿ, ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗಂಗಾವತಿಯ ಶ್ರೀ ಕಾಳಿಕಾದೇವಿ ವಿಶ್ವಕರ್ಮ ಸಮಾಜ ಕ್ಷೇಮಾಭಿವೃದ್ಧಿ ಸಂಘ , ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳಿ ಹಾಗೂ ಶ್ರೀ ವಿಶ್ವಕರ್ಮ ಯುವ ಮಿತ್ರರ ನೇತೃತ್ವದಲ್ಲಿ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ಜರುಗಿದವು.
ವಾರ್ಷಿಕೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿದ್ದು, ವಿಶ್ವಕರ್ಮ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧಾರ್ಮಿಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

Total Views: 0
Share This Article
Leave a Comment