ಜಾಹೀರಾತು

Minister Shivaraj Tangadagi inaugurates the 'Praja Seva Andolana' meeting by watering a plant.

ಗಿಡಕ್ಕೆ ನೀರೆರೆಯುವ ಮೂಲಕ ಪ್ರಜಾ ಸೇವಾ ಆಂದೋಲನ ಸಭೆಗೆ ಸಚಿವ ಶಿವರಾಜ ತಂಗಡಗಿ ಚಾಲನೆ
ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ
ಗಂಗಾವತಿ: ಜಿಲ್ಲಾ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಗೆ ಸಚಿವ ಶಿವರಾಜ ತಂಗಡಗಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆಯನ್ನು ಆಯೋಜಿಸಲಾಗಿತ್ತು. ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಅವುಗಳಿಗೆ ಸ್ಪಂದಿಸಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರದಿ: ಶರಣಯ್ಯ ಹಿರೇಮಠ
Total Views:
1


