ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕುಷ್ಟಗಿಯಲ್ಲಿ ಬಸವಪರ ಸಂಘಟನೆಗಳ ಬೃಹತ್ ಪ್ರತಿಭಟನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕುಷ್ಟಗಿಯಲ್ಲಿ ಬಸವಪರ ಸಂಘಟನೆಗಳ ಬೃಹತ್ ಪ್ರತಿಭಟನೆ

ಜಾಹೀರಾತು
Derogatory remarks against Basavanna: Massive protest by pro-Basavanna organizations in Kushtagi
 

ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ – ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಲು ಒತ್ತಾಯ

 


ಕುಷ್ಟಗಿ: ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ವಿವಾದಿತ ‘ಬಸವ ಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿ ಕುಷ್ಟಗಿ ತಾಲೂಕಿನಲ್ಲಿ ಬಸವಪರ ಸಂಘಟನೆಗಳು, ಜಾಗತಿಕ ಲಿಂಗಾಯತ ಧರ್ಮ ಮಹಾಸಭಾ ಹಾಗೂ ಕುಷ್ಟಗಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ಅಮರೇಗೌಡ ಪಾಟೀಲ್, ಮಾಜಿ ಶಾಸಕ ಶರಣಪ್ಪ ವಕೀಲರು, ಜಾಗತಿಕ ಲಿಂಗಾಯತ ಧರ್ಮ ಮಹಾಸಭಾದ ತಾಲೂಕು ಅಧ್ಯಕ್ಷ ಹಾಗೂ ನಿವೃತ್ತ ಉಪನ್ಯಾಸಕ ಟಿ. ಬಸವರಾಜ, ತಾಲೂಕು ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ವಕೀಲರ ಸಂಘದ ಪದಾಧಿಕಾರಿಗಳು, ಬಸವರಾಜ ಹೂಗಾರ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Total Views: 0
Share This Article
Leave a Comment