

4th Annual Free Mass Wedding at Sri Channamallikarjuna Matha on Jan 3rd

ಜ. 3ರಂದು ಶ್ರೀ ಚನ್ನಮಲ್ಲಿಕಾರ್ಜುನ ಮಠದಲ್ಲಿ ನಾಲ್ಕನೇ ವರ್ಷದ ಉಚಿತ ಸಾಮೂಹಿಕ ವಿವಾಹ
ವಧು-ವರರು ಡಿ. 23ರೊಳಗೆ ಹೆಸರು ನೋಂದಾಯಿಸಿಕೊಳ್ಳಲು ಮನವಿ
ಗಂಗಾವತಿ, ನ. 25: ನಗರದ ಶ್ರೀ ಚನ್ನಮಲ್ಲಿಕಾರ್ಜುನ ಮಠದ ಆವರಣದಲ್ಲಿ ನಾಲ್ಕನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು 2027ರ ಜನವರಿ 3ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಆಡಳಿತ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಚನ್ನಮಲ್ಲಿಕಾರ್ಜುನ ಟ್ರಸ್ಟ್ ಕಮಿಟಿ, ಕಲ್ಯಾಣ ಮಂಟಪ ಸಮಿತಿ, ಪುರಾಣ ಸಮಿತಿ ಹಾಗೂ ಸೇವಾ ಸಮಿತಿಗಳ ನೇತೃತ್ವದಲ್ಲಿ ಈ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಈ ಕುರಿತು ನಗರದ ಶ್ರೀ ಚನ್ನಮಲ್ಲಿಕಾರ್ಜುನ ಮಠದ ಪುರಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಠದ ಪದಾಧಿಕಾರಿಗಳು, ಸಾಮೂಹಿಕ ವಿವಾಹದಲ್ಲಿ ಭಾಗವಹಿಸಲು ಇಚ್ಛಿಸುವ ವಧು-ವರರು 2026ರ ಡಿಸೆಂಬರ್ 23ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ವಿವಾಹದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ವಧು-ವರರು ಹೆಸರು ನೋಂದಾಯಿಸಿಕೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹೊಸಹಳ್ಳಿ ಶಂಕರಗೌಡ, ಚನ್ನಬಸಯ್ಯಸ್ವಾಮಿ, ಸಿದ್ದಾಪುರ ರಾಜಪ್ಪ, ಗಲಗಲಿ ಮಹಾಂತೇಶ, ಅಕ್ಕಿ ಪ್ರಕಾಶ, ಬರಗೂರು ನಾಗರಾಜ, ವಲ್ಕಾಂದ್ದಿನಿ ಸೂಗಪ್ಪ, ಅಶೋಕ ಪಾಟೀಲ್, ವೀರಣ್ಣ ಶೆಟ್ಟರ್, ಲಿಂಗರಾಜ, ನಾಗರಾಜ, ವೀರನಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.


