ಜಾಹೀರಾತು

ಜಾಹೀರಾತು

Campaign Against Violence Against Women and Child Marriage: One-Day Workshop a Success

ಮಹಿಳಾ ದೌರ್ಜನ್ಯ ತಡೆ, ಬಾಲ್ಯ ವಿವಾಹ ಮುಕ್ತ ಅಭಿಯಾನ: ಒಂದು ದಿನದ ಕಾರ್ಯಾಗಾರ ಯಶಸ್ವಿ
ಕೊಪ್ಪಳ, ನವೆಂಬರ್ 25 : ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆ, ಬಾಲ್ಯ ವಿವಾಹ ಮುಕ್ತ ಭಾರತ ನಿರ್ಮಾಣ ಹಾಗೂ ಕೌಟುಂಬಿಕ ಸಾಮರಸ್ಯ ಮೂಡಿಸುವ ‘ಕೂಡಿ ಬಾಳೋಣ’ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ನ. 25ರಂದು) ಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಸ್ಪಂದನ ಅಸೋಸಿಯೇಷನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ದರಗದ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅಮರೇಶ ಹಾವಿನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೋಟಗಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳಾದ ನಟರಾಜ್, ಸ್ಪಂದನ ಅಸೋಸಿಯೇಷನ್ನ ಕಾರ್ಯಕ್ರಮ ಸಂಯೋಜಕರಾದ ಮಂಜುಳಾ ಹಾಗೂ ಯುನಿಸೆಫ್ ಮಕ್ಕಳ ರಕ್ಷಣಾ ಘಟಕದ ವ್ಯವಸ್ಥಾಪಕರಾದ ಹರೀಶ್ ಜೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Total Views:
0


