

Horrific road accident near Gangavati–Ayodhya: Two young men die on the spot!
\


\n
ಗಂಗಾವತಿ–ಅಯೋಧ್ಯ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು!
ಸಾರಿಗೆ ಬಸ್–ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸಂಪೂರ್ಣ ನುಜ್ಜುಗುಜ್ಜು
ಗಂಗಾವತಿ, ನ. 26: ತಾಲೂಕಿನ ಅಯೋಧ್ಯ ಮತ್ತು ಹೊಸಳ್ಳಿ ಕ್ರಾಸ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಅಯೋಧ್ಯ ಗ್ರಾಮದ ಬಳೋಡಪ್ಪ ಸೂಜಿ (28) ಹಾಗೂ ಹುಸೇನಪ್ಪ (38) ಎಂದು ಗುರುತಿಸಲಾಗಿದೆ. ಇಬ್ಬರೂ ಯುವಕರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಕಂಪ್ಲಿಯಿಂದ ಗಂಗಾವತಿಗೆ ಬರುತ್ತಿದ್ದ ಕೂಡ್ಲಿಗಿ ಘಟಕದ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಇಬ್ಬರು ಯುವಕರ ಜೀವವನ್ನು ಕಸಿದುಕೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗಂಗಾವತಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಒಂದೇ ಗ್ರಾಮದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಅಯೋಧ್ಯ ಗ್ರಾಮದಲ್ಲಿ ದುಃಖದ ಛಾಯೆ ಮೂಡಿಸಿದೆ.


