ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರ: ಶಿವರಾಜ ಕೆ. ಬಂಡಿ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು
State Congress government hits the pockets of the common people: Shivaraja K. Bandi

ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರ: Chandr

ಜಾಹೀರಾತು

ಕೆ. ಬಂಡಿ

ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ರೋಣ ಮಂಡಲದಿಂದ ಪ್ರತಿಭಟನೆ

ಗಜೇಂದ್ರಗಡ: ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಒಂದು ಕೈಯಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಹಣ ನೀಡಿ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ಮೂಲಕ ಅದನ್ನೇ ಕಸಿದುಕೊಳ್ಳುತ್ತಿದೆ ಎಂದು ಬಿಜೆಪಿ ಯುವ ಮುಖಂಡ ಶಿವರಾಜ ಕೆ. ಬಂಡಿ ಆರೋಪಿಸಿದರು.
ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ರೋಣ ಮಂಡಲದ ವತಿಯಿಂದ ಗಜೇಂದ್ರಗಡ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೋಣ ಮಂಡಲದ ಅಧ್ಯಕ್ಷ ಉಮೇಶ್ ಮಲ್ಲಾಪೂರ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯುವ ಮುಖಂಡ ಶಿವರಾಜ ಕೆ. ಬಂಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಒಂದು ಕೈಯಲ್ಲಿ ಕೊಟ್ಟು, ಅದನ್ನೇ ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುವುದು ಸರಿಯಲ್ಲ. ಬಡವರು ಮತ್ತು ಸಾಮಾನ್ಯ ಜನರ ಮೇಲೆ ಸರ್ಕಾರಕ್ಕೆ ಇಷ್ಟೊಂದು ಹೊರೆ ಹಾಕುವ ಅಗತ್ಯವೇನು ಎಂದು ಪ್ರಶ್ನಿಸಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಹಣದ ಕೊರತೆ ಎದುರಾಗಿದೆ. ಅದನ್ನು ಸರಿದೂಗಿಸಲು ಬೆಲೆ ಏರಿಕೆ ಹಾಗೂ ಬಸ್ ಟಿಕೆಟ್ ದರ ಹೆಚ್ಚಳದ ಮೂಲಕ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲು ಸರ್ಕಾರ ಮುಂದಾಗಿದೆ ಎಂದು ಅವರು ವ್ಯಂಗ್ಯವಾಡಿದರು.
ಸರ್ಕಾರದ ಈ ಜನವಿರೋಧಿ ನೀತಿಗಳಿಂದ ಬಡವರು, ಮಧ್ಯಮ ವರ್ಗದವರು ಹಾಗೂ ದಿನನಿತ್ಯ ಪ್ರಯಾಣಿಸುವ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರ ಬದುಕಿನ ಮೇಲೆ ಹೊರೆ ಹೆಚ್ಚಿಸುವ ನಿರ್ಧಾರಗಳನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಉಮೇಶ್ ಮಲ್ಲಾಪೂರ, ಮುತ್ತಣ್ಣ ಖಡಗದ, ಅಶೋಕ ನವಲಗುಂದ, ಬಸನಗೌಡ ಪೊಲೀಸಪಾಟಿಲ್, ಶರಣಪ್ಪ ಕಂಬ್ಳಿ, ಆರ್.ಕೆ. ಚವ್ಹಾಣ್, ರಾಜೇಂದ್ರ ಘೋರ್ಪಡೆ, ರಮೇಶ್ ವಕ್ಕರ್, ಅನಿಲ್ ಪಲ್ಲೆದ, ಹುಲ್ಲಪ್ಪ ಕೆಂಗಾರ್, ಮಲ್ಲು ಮಾದರ, ಅನುರಾಗ ಚಿನಿವಾಲರ್, ಕಿರಣ್ ಕಮ್ಮಾರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Total Views: 0
Share This Article
Leave a Comment