ಬಿಜೆಪಿ ಒಬಿಸಿ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮಾರ್ಕಂಡಯ್ಯ ಕುಣಿಕೇರಿ ಆಯ್ಕೆ!

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು
Markandayya Kunikeri selected as General Secretary of the BJP OBC Rural Unit!

ಬಿಜೆಪಿ ಒಬಿಸಿ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮಾರ್ಕಂಡಯ್ಯ ಕುಣಿಕೇರಿ ಆಯ್ಕೆ!

ಜಾಹೀರಾತು

ಪಕ್ಷದ ಸಂಘಟನೆಯಲ್ಲಿ ಸಲ್ಲಿಸಿದ ಸೇವೆಗೆ ಮನ್ನಣೆ – ಪದಾಧಿಕಾರಿಗಳಿಂದ ಅಭಿನಂದನೆ

ಗಂಗಾವತಿ: ಭಾರತೀಯ ಜನತಾ ಪಾರ್ಟಿಯ ಒಬಿಸಿ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮಾರ್ಕಂಡಯ್ಯ ಕುಣಿಕೇರಿ ಅವರು ಆಯ್ಕೆಯಾಗಿದ್ದಾರೆ.

ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ವಿವಿಧ ಹಂತಗಳಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಮಾರ್ಕಂಡಯ್ಯ ಕುಣಿಕೇರಿ ಅವರ ಕಾರ್ಯವನ್ನು ಗುರುತಿಸಿದ ಪಕ್ಷದ ವರಿಷ್ಠರು, ಅವರಿಗೆ ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ.

ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಸೇವೆ ಹಾಗೂ ಕಾರ್ಯಚಟುವಟಿಕೆಗಳಿಗೆ ಮನ್ನಣೆ ನೀಡಿ, ಒಬಿಸಿ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ನಿಕಟಪೂರ್ವ ಶಾಸಕ ಪರಣ್ಣ ಮುನವಳ್ಳಿ, ಗ್ರಾಮೀಣ ಘಟಕದ ಅಧ್ಯಕ್ಷ ಡಿ.ಕೆ. ಆಗೋಲಿ, ವೀರನಗೌಡ ಗಚ್ಚಿನಮನಿ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಪ್ರಧಾನ ಕಾರ್ಯದರ್ಶಿ ಮಾರ್ಕಂಡಯ್ಯ ಕುಣಿಕೇರಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಮಾರ್ಕಂಡಯ್ಯ ಕುಣಿಕೇರಿ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಪಕ್ಷದ ವರಿಷ್ಠರು, ಮುಖಂಡರು ಹಾಗೂ ಸ್ನೇಹಿತರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಷ್ಠೆ, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿರ್ವಹಿಸುವುದರ ಜೊತೆಗೆ, ಒಬಿಸಿ ಗ್ರಾಮೀಣ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಕಂಡಯ್ಯ ಕುಣಿಕೇರಿ ಅವರ ಆಯ್ಕೆಗೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Total Views: 0
Share This Article
Leave a Comment