The short URL of the present article is: https://kalyanasiri.in/3dfm
ಜಿಲ್ಲೆಯಲ್ಲಿ ಡಿ. 21 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
ಜಾಹೀರಾತು

ಐದು ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಕಡ್ಡಾಯವಾಗಿ ಹಾಕಿಸಿ – ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
Make two drops of polio mandatory for children under five years of age - District Collector Dr. Suresh Itnal
ಕೊಪ್ಪಳ ಡಿಸೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಸಾರ್ವಜನಿಕರು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋ ರೋಗವನ್ನು ತಡೆಗಟ್ಟಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮನವಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಡಿ. 21 ರಿಂದ 24ರ ವರೆಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ. 21 ರಂದು ಬೂತ್ ಮಟ್ಟದಲ್ಲಿ ಲಸಿಕೆ ಹಾಕಲಾಗುತ್ತದೆ. ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಡಿನೀಡಿ, ಲಸಿಕಾ ಕಾರ್ಯಕರ್ತರು ಪೋಲಿಯೋ ಲಸಿಕೆ ಹಾಕುತ್ತಾರೆ.
ಜಿಲ್ಲೆಯಲ್ಲಿ ಸಮಸ್ಯಾತ್ಮಕ ಪ್ರದೇಶಗಳಾದ ಇಟ್ಟಗೆಭಟ್ಟಿ, ವಲಸೆ ಜನಾಂಗ, ಕಟ್ಟಡ ಕಾರ್ಮಿಕರ ಮಕ್ಕಳು, ಕಬ್ಬು ಕಟಾವು ಮಾಡುವ ಕಾರ್ಮಿಕ ಮಕ್ಕಳಿಗೆ ಲಸಿಕೆ ಹಾಕುವ ಕ್ರಿಯಾಯೋಜನೆ ಸಹ ರೂಪಿಸಿಕೊಳ್ಳಲಾಗಿದೆ ಹಾಗೂ ಈ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳು ರೋಟರಿಕ್ಲಬ್, ಲಯನ್ಸ್ ಕ್ಲಬ್ ಮತ್ತು ಇತರೆ ಸರ್ಕಾರೇತರ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಲಿದ್ದಾರೆ. ಈಗಾಗಲೇ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಜಾಗೃತ ಸಮಿತಿ ಸಭೆ ನಡೆಸಿ, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ತಾಲೂಕಾ, ಜಿಲ್ಲಾಮಟ್ಟದಲ್ಲಿ ಕ್ರಿಯಾಯೋಜನೆ ತಯಾರಿಸಿಕೊಂಡು ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ 0 ದಿಂದ 5 ವರ್ಷದೊಳಗಿನ ಮಕ್ಕಳ ಸಂಖ್ಯೆಯ ಗುರಿ ಒಟ್ಟು 1,76,580 ಆಗಿದ್ದು, ಲಸಿಕಾ ಕಾರ್ಯಕ್ರಮಕ್ಕಾಗಿ 877 ಬೂತ್ಗಳು, 19 ಮೊಬೈಲ್ ತಂಡಗಳು, 59 ಟ್ರಾನ್ಸಿಟ್ ತಂಡಗಳು ಹಾಗೂ 2386 ಲಸಿಕಾ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಪ್ರತಿ ತಾಲೂಕಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ವಿವಿಧ ವೃಂದದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕ್ಷೇತ್ರ ಭೇಟಿ ಮಾಡಲು ಮೇಲ್ವಿಚಾರಕರನ್ನಾಗಿ ನಿಯೋಜಿಸಲಾಗಿದೆ. ಒಟ್ಟಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ.
ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ನಮ್ಮ ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ರೋಗವು ಇನ್ನೂ ಭೀತಿಯನ್ನುಂಟುಮಾಡುತ್ತಿದ್ದು, ನಮ್ಮ ದೇಶದಲ್ಲೂ ಈ ರೋಗ ಮರುಕಳಿಸಬಹುದಾದ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಮಗುವಿಗೆ ಪ್ರತಿ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು.
ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜೊತೆ ಕೈಜೋಡಿಸಿ, ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋವನ್ನು ಲಸಿಕೆ ಮೂಲಕ ಪ್ರತಿರೋಧಿಸೋಣ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ ಪುನಃ ಇದೇ ಡಿಸೆಂಬರ್ 21 ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ತಪ್ಪದೇ ನಿಮ್ಮ 0 ದಿಂದ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪ್ರಕಟಣೆ ತಿಳಿಸಿದೆ.