ಸುಳ್ವಾಡಿ ದುರಂತಕ್ಕೆ ಕಾರಣರಾದ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಸಂತ್ರಸ್ತರ ಆಕ್ರೋಶ .
Victims' anger over bail granted to Immadi Mahadevswamy, who was responsible for the Sulvadi tragedy.
ವರದಿ: ಬಂಗಾರಪ್ಪ .ಸಿ.
ಹನೂರು : ಇಡಿ ದೇಶವೆ ತಿರುಗಿ ನೋಡುವಂತೆ ಮುಗ್ದ ಜನರ ಸಾವಿಗೆ ಕಾರಣರಾಗಿ
ಸುಳ್ವಾಡಿ ವಿಷ ಪ್ರಸಾದ ನೀಡಿದ ವರಿಗೆ ಜಾಮೀನು ನೀಡಿದ ಹಿನ್ನೆಲೆ ಕೋರ್ಟ್ಗೆ ಹಾಜರಾದ ಇಮ್ಮಡಿ ಮಹಾದೇವಸ್ವಾಮಿ .
ಹನೂರು ತಾಲ್ಲೂಕಿನ
ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಜಾಮೀನಿನ ಮೇಲೆ ಸೋಮವಾರ ಮೈಸೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹನೂರು ತಾಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಎ1 ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಜಾಮೀನಿನ ಮೇಲೆ ಸೋಮವಾರ ಮೈಸೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನು ಪ್ರತಿಯನ್ನು ಸಲ್ಲಿಸಲು ಮತ್ತು ವಿಚಾರಣೆಗಾಗಿ ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಇಮ್ಮಡಿ ಮಹಾದೇವಸ್ವಾಮಿ ಇಂದು ಖುದ್ದು ಹಾಜರಾದರು. ಕಾವಿ ಧರಿಸದೇ ಶ್ವೇತ ವಸ್ತ್ರಧಾರಿಯಾಗಿ ನ್ಯಾಯಾಲಯಕ್ಕೆ ಹಾಜರಾದ ಮಹಾದೇವಸ್ವಾಮಿ, ವಿಚಾರಣೆ ಮುಗಿಸಿ ತೆರಳಿದರು.
ಇಮ್ಮಡಿ ಮಹಾದೇವಸ್ವಾಮಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ: 2018ರ ಡಿ.14 ರಂದು ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ದೇವರ ಪ್ರಸಾದಕ್ಕೆ ವಿಷ ಬೆರೆಸಿದ್ದ ಟೊಮೆಟೊ ಬಾತ್ ತಿಂದು ಎಂ. ಜಿ. ದೊಡ್ಡಿ, ಮಾರ್ಟಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ 17 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. 123ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಇಮ್ಮಡಿ ಮಹಾದೇವಸ್ವಾಮಿ 2018 ರಿಂದ ಮೈಸೂರು ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದರು.
ಇಮ್ಮಡಿ ಮಹಾದೇವಸ್ವಾಮಿ ಜಾಮೀನು ಮಂಜೂರು ಖಂಡಿಸಿ ಪ್ರತಿಭಟನೆ: ಸುಳ್ವಾಡಿ ವಿಷ ಪ್ರಸಾದ ದುರಂತದ ಮೊದಲನೇ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಮಂಜೂರು ಖಂಡಿಸಿ ಸಂತ್ರಸ್ತರು ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲ ಮುಂಭಾಗ ಜಮಾಯಿಸಿದ ಸಂತ್ರಸ್ತ ಕುಟುಂಬಗಳು, ಕೈಯಲ್ಲಿ ಪೆಟ್ರೋಲ್ ಹಿಡಿದು ಇಮ್ಮಡಿ ಮಹಾದೇವಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ, ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದರು.
2018ರಲ್ಲಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿದ ಘಟನೆಯಲ್ಲಿ 17 ಮಂದಿ ಅಮಾಯಕ ಭಕ್ತರು ಮೃತಪಟ್ಟು, 123 ಮಂದಿ ಅಸ್ವಸ್ಥಗೊಂಡಿದ್ದರು. ಈಗಲೂ ಕೂಡ ಅಂದಿನ ದುರಂತ ತಂದ ಅಡ್ಡ ಪರಿಣಾಮಗಳಿಂದ ಕಿರಿಯರು, ಹಿರಿಯರು ನರಳಾಡುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಮಹಾದೇವಸ್ವಾಮಿಗೆ ಜಾಮೀನು ಮಂಜೂರಾಗಿರುವುದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿ ಜಾಮೀನು ತಡೆಹಿಡಿಯಬೇಕು ಎಂದು ಅವರು ಒತ್ತಾಯಿಸಿದ್ದರು.
ದೇವಾಲಯ ಮುಂದೆ ಜಮಾಯಿಸಿದ ಸಂತ್ರಸ್ತ ಕುಟುಂಬಗಳು ಇಮ್ಮಡಿ ಮಹಾದೇವಸ್ವಾಮಿಗೆ ಹಿಡಿಶಾಪ ಹಾಕಿ ದುರಂತ ನೆನೆದು ಕಣ್ಣೀರಿಟ್ಟಿದ್ದರು. ದುರಂತದಲ್ಲಿ ಬದುಕಿದವರು ಈಗಲೂ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಮನೆಗೆ ಆಧಾರಸ್ತಂಭವಾಗಿದ್ದವರನ್ನು ಕಳೆದುಕೊಂಡು ಪರಿತಪಿಸುತ್ತಿದ್ದು, ಇದಕ್ಕೆಲ್ಲಾ ಕಾರಣನಾದ ಇಮ್ಮಡಿ ಮಹಾದೇವಸ್ವಾಮಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಸಂತ್ರಸ್ತ ಕುಟುಂಬಸ್ಥರು ತಮ್ಮ ಅಳಲನ್ನು ತೋಡಿಕೊಂಡರು.
Kalyanasiri Kannada News Live 24×7 | News Karnataka
