
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ -ಸಿದ್ದನಗೌಡ ಪಾಟೀಲ

Make North Karnataka a separate state - Siddhan Gowda Patil
ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ಸಿದ್ದನಗೌಡ ಪಾಟೀಲ
ಸಚೀನ ಆರ್ ಜಾಧವ
ಸಾವಳಗಿ: ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ, ಸರ್ಕಾರ ಉತ್ತರ ಕರ್ನಾಟಕವನ್ನು ಅಭಿವೃದ್ಧಿ ಮಾಡುವುದನ್ನು ಮರೆತು ಹೋಗಿದೆ ಕಿತ್ತೂರು ಕಲ್ಯಾಣ ಕರ್ನಾಟಕ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸಿದ್ದನಗೌಡ ಪಾಟೀಲ ಎಂದು ಹೇಳಿದರು.
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಕಿತ್ತೂರು ಕಲ್ಯಾಣ ಕರ್ನಾಟಕ ಸೇನೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸಿದ್ದನಗೌಡ ಪಾಟೀಲ ಅವರ ನೇತೃತ್ವದಲ್ಲಿ ಉತ್ತರ ಕರ್ನಾಟಕಕ್ಕೆ ಆಗುವತ್ತಿರುವ ಅನ್ಯಾಯ ಹಾಗೂ ಕಲ್ಯಾಣ ಕರ್ನಾಟಕಕ್ಕೆ ನಿರ್ಲಕ್ಷ್ಯ ತೋರುತ್ತಿರುವ ಸರ್ಕಾರದ ವಿರುದ್ಧ ಪಾದಯಾತ್ರೆ ಮೂಲಕ ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಾದ ಮಾನ್ಯ ಶ್ರೀ ರಹೀಮಖಾನ ಅವರಿಗೆ ಮನವಿ ಸಲ್ಲಿಸಿದರು.
ಮಹಾರಾಷ್ಟ್ರ ಕೇಲವು ಜಿಲ್ಲೆಯಗಳ್ಳನ್ನು ಕೂಡಿಸಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಿ ಅಧಿಕಾರಿಗಳು ಉತ್ತರ ಕರ್ನಾಟಕದ ಜನರನ್ನು ತಮ್ಮ ಕೈ ಗೊಂಬೆಯಂತೆ ತಮಗೆ ಅನುಗುಣವಾಗಿ ಅನುಕೂಲಕ್ಕಾಗಿ ಜನಪ್ರತಿನಿಧಿಗಳನ್ನು ಬಳಸುತ್ತಿದ್ದಾರೆ. ಮುಂಬೈ ಹಾಗೂ ಹೈದರಾಬಾದ್ ಕರ್ನಾಟಕ ರಾಜಕಾರಣಿಗಳು ಅನ್ಯಾಯ ಮಾಡುತ್ತಾ ಬಂದಿದ್ದಾರೆ.
ರಾಜ್ಯದಲ್ಲಿ ಮಲತಾಯಿ ದೋರನ್ನೆಯನ್ನು ಅನುಸರಿಸುತ್ತಾ ಬಂದಿರುತ್ತಾರೆ ಇದರಿಂದ ಉತ್ತರ ಕರ್ನಾಟಕಕ್ಕೆ ತುಂಬಲಾರದ ನಷ್ಟವಾಗಿದ್ದು ಇದರ ಬಗ್ಗೆ ನಾವು ಹಲವಾರು ಬಾರಿ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮುಖಾಂತರ ಹಾಗೂ ಚಳುವಳಿ ಮೂಲಕ ಹಲವು ಬಾರಿ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಒಟ್ಟಿನಲ್ಲಿ ದಕ್ಷಿಣ ಕರ್ನಾಟಕಕ್ಕೆ ನೀಡುವ ಆದ್ಯತೆಯನ್ನು ನಮ್ಮ ಉತ್ತರ ಕರ್ನಾಟಕಕ್ಕೂ ಸಹ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಿತ್ತೂರು ಕಲ್ಯಾಣ ಕರ್ನಾಟಕ ಸೇನೆ ಪಕ್ಷದ ರಾಜ್ಯ ಉಪಾಧ್ಯಕ್ಷ ಉಮೇಶ್ ದೇಶನೂರ, ಕಾರ್ಯದರ್ಶಿ ಆನಂದ ಡಬ್ಬನವರ, ಬಸವರಾಜ ಶೇಟ್ಟಿ, ಸಂತೋಷ ಹಿರೇಮಠ, ಸಂಗಮೇಶ ಬಿರಾದಾರ, ಕಲ್ಲಪ್ಪ ಬಿರಾದಾರ, ಮಲ್ಲಿಕಾರ್ಜುನ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




