Condemn petrol and diesel price hike: Protest from BJP
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೊಪ್ಪಳ ಗಡಿಯಾರ ಕಂಬದ ಮುಂದುಗಡೆ ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾ ವತಿಯಿಂದ ಗ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆ ನೇತೃತ್ವ ವಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣವರ್ ಮಾತನಾಡಿ ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ಗೆಲ್ಲಲೂ ರಾಜ್ಯದ ಜನಕ್ಕೆ ಉಚಿತ, ಖಚಿತ, ನಿಶ್ಚಿತ ಎನ್ನುವ ಗ್ಯಾರಂಟಿ ಕೊಡುವ ಭರವಸೆಯನ್ನು ನೀಡಿ ಅದನ್ನು ಈಡೇರಿಸಲು ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗ ಪೆಟ್ರೋಲ್, ಡಿಸೇಲ್ ಬೆಲೆಗಳನ್ನು ಹೆಚ್ಚಿಸಿದೆ. ಖಜಾನೆ ಖಾಲಿಯಾಗಿದೆ.
ಖಜಾನೆಯನ್ನು ತುಂಬಿಸಲು ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆಯನ್ನು ಹಾಕುವ ಮೂಲಕ ಕಷ್ಟಕ್ಕೆ ದೂಡಲು ಮುಂದಾಗಿರುವ ಕಾಂಗ್ರೆಸ್ ಸರಕಾರ ಇನ್ನೂ ಮೇಲಾದರು ಎಚ್ಚೆತ್ತುಕೊಂಡು ಈ ನಿರ್ಧಾರವನ್ನು ಹಿಂಪಡೆಯಬೇಕು.
ರಾಜ್ಯದ ಜನತೆಯ ಜೇಬಿಗೆ ಕೈ ಹಾಕುವುದನ್ನು ಬಿಟ್ಟು ಜನ ಕಲ್ಯಾಣ ಕಾರ್ಯಕ್ರಮಗಳನ್ನು ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕುಷ್ಟಗಿ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ಶಾಸಕ ಗಾಲಿ ಜನಾರ್ದನ ರೆಡ್ಡಿ,ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗುರ್, ಮಂಜುನಾಥ ನಾಡಗೌಡರ, ಪ್ರಕಾಶ ಹಿರೇಮನಿ, ಮಾರುತಿ ಗಾವರಾಳ ಹಾಗೂ ಎಲ್ಲಾ ಮಂಡಲದ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಪಂಚಯ್ಯ ಹಿರೇಮಠ