Breaking News

ಮಾದಪ್ಪನ ಹುಂಡಿಯಲ್ಲಿ ಹೆಚ್ಚಿದ ಹಣ ಭಕ್ತರ ಸಂಖ್ಯೆಯಲ್ಲಿ ಏರಿಕೆ

Huge increase in number of devotees


ವರದಿ : ಬಂಗಾರಪ್ಪ ,ಸಿ .
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.
ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.
ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,20,97,533 ನಗದು 106 ಗ್ರಾಂ ಚಿನ್ನ ಹಾಗೂ 2.1000 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ ಇ ಹುಂಡಿಯಿಂದ 3,38,830, ವಿದೇಶಿ ನೋಟುಗಳು‌ ಡಾಲರ್ 3, ಅರಬ್ 1, ನೇಪಾಳ 1, ಉಮನ್ ದೇಶದ 1 ಒಟ್ಟು 6. ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 19 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.

ಇದೇ ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಸೇರಿದಂತೆ ಇನ್ನಿತರರು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

About Mallikarjun

Check Also

ಆಶಾಕಾರ್ಯಕರ್ತೆಯರ  ಪ್ರಥಮ  ಸಮ್ಮೇಳನ:

 ಗಂಗಾವತಿ: ನಗರದಲ್ಲಿ  ನಗರ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.