ವಕೀಲ ವೃತ್ತಿ ಶ್ರೇಷ್ಠ ನ್ಯಾ.ಮೂ.ಎಂ.ಜಿ. ಶುಕುರೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Advocate Vrittis Shrestha Ny.Moo.M.G.

ಜಾಹೀರಾತು

ಕುಕನೂರು: ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರವು ಸಹ ಪ್ರಮುಖವಾಗಿದ್ದು, ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ಹೇಳಿದರು.

ಕುಕನೂರ ತಾಲೂಕಾ ನ್ಯಾಯಾಲಯದಲ್ಲಿ ವಕೀಲರು ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಕೀಲ ವೃತ್ತಿ ಶ್ರೇಷ್ಠ ಸೇವೆಯಾಗಿದ್ದು, ನೊಂದವರಿಗೆ ನ್ಯಾಯ ಒದಗಿಸುವ ಮಹತ್ತರ ಹೊಣೆಗಾರಿಕೆ ನಮ್ಮ ಮೇಲಿದೆ. ನಾವು ನಮ್ಮ ವೃತ್ತಿಯೊಂದಿಗೆ ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ. ಏನು ಸಹಾಯ ಮಾಡಿದ್ದೇವೆ ಅನ್ನುವುದನ್ನು ನೋಡಬೇಕು.

ನೊಂದವರಿಗೆ, ಸಂತ್ರಸ್ತರಿಗೆ, ಬಡ ವರ್ಗದರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಶ್ರಮಿಸಬೇಕು. ನಿಮ್ಮ ವೃತ್ತಿಯೂ ಸಹ ಒಂದು ಸಮಾಜ ಸೇವೆಯಾಗಿದೆ. ಯಾವುದೇ ಒಂದು ಸಣ್ಣ ಸಮಸ್ಯೆ ಬಂದರೂ ಸಹ ವಕೀಲರು ಅದನ್ನು ಬಗೆಹರಿಸಲು ಸಿದ್ದರಿರಬೇಕು.

ನನ್ನಿಂದ ಈ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಎಂಬ ಭಾವನೆ ಬರದಿರಲಿ. ಹಿರಿಯ ವಕೀಲರಿಂದ ಮಾರ್ಗದರ್ಶನ ಪಡೆದು ಮುನ್ನಡೆಯಬೇಕು ಎಂದು ಹೇಳಿದರು.

ಕುಕನೂರ ಹೊಸ ನ್ಯಾಯಾಲಯದ ಸಂಕೀರ್ಣಕ್ಕೆ ಅನುದಾನ ಹಾಗೂ ವಕೀಲರ ಸಂಘದ ಬೇಡಿಕೆಗಳಿಗೆ ನ್ಯಾಯಾಂಗದ ಪರವಾಗಿ ಏನು ಮಾಡಲು ಸಾಧ್ಯವಿದೆ. ಅದಕ್ಕೆ ತಾವು ಪ್ರಯತ್ನಿಸುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ವಕೀಲರ ಸಂಘದ ಪರವಾಗಿ ಕುಕನೂರು ನ್ಯಾಯಾಲಯವನ್ನು ಶಾಶ್ವತ ನ್ಯಾಯಾಲಯವನ್ನು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಚಂದ್ರಶೇಖರ ಅವರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ (ಪ್ರಭಾರಿ) ಮಹಾಂತೇಶ ದರಗದ, ಸಿವಿಲ್ ನ್ಯಾಧೀಶರಾದ ಆಯಿಷಾ.ಪಿ. ಮಜೀ, ಯಲಬುರ್ಗಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೆಲೇರಿ, ಕಾರ್ಯದರ್ಶಿ ಐ.ಬಿ.ಕೋಳುರ, ವಕೀಲರ ಮಹಾಂತೇಶ ಬೂದಗುಂಪಿ, ಬಸವರಾಜ ಜಂಗ್ಲಿ, ಆನಂದ ಉಳ್ಳಾಗಡ್ಡಿ, ಅಡವೆಪ್ಪ ಬೋರಣ್ಣವರ್, ಸಂಗಮೇಶ ಅಂಗಡಿ ಇನ್ನಿತರರು ಇದ್ದರು

Total Views: 0
Share This Article