ವರದಿ : ಬಂಗಾರಪ್ಪ ,ಸಿ
ಚಾಮರಾಜನಗರ : ಎರಡು ಜಿಲ್ಲೆಯ ಮಣ್ಣಿನ ರಾಜಕೀಯದ ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಕೂಡಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ ಮತ ನೀಡಿದ ಮತದಾರ ಬಂದುಗಳಿಗೆ ಸಾರ್ವಜನಿಕ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಿದರು.
ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಲೋಕಸಭಾ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು
ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ ಎಂದು ರಾಜ್ಯದ ಸಂಸದರಿಗೆ ವೇದಿಕೆಯಲ್ಲಿ ಕರೆ ಕೊಡುವುದಾಗಿ ತಿಳಿಸಿದರು
ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ರೂಪಿಸಿದೆ ,
ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು ಸೇರಿದಂತೆ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನಮ್ಮ ಪಕ್ಷದ ಗುರಿಯಾಗಿದೆ ಇದು ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಸಹ ಆಗಿದೆ ಎಂದರು.
ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರಲ್ಲಿ ಕಾಂಗ್ರೆಸ್ಸಿಗರು ಮೊದಲಿನವರು . ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ (ಬಿಜೆಪಿಯವರು) ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು ಎಂದು ಹೋರಾಟದ ದಿನಗಳನ್ನು ನೆನಪಿಸಿದರು.
ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.
ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ
ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ ಎಂದರು.
ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಚಾಮರಾಜನಗರ ಸಂಸದರಾದ. ಸುನೀಲ್ ಬೋಸ್ , ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್ ,ಸಚಿವರುಗಳಾದ ಹೆಚ್ ಸಿ ಮಹಾದೇವಪ್ಪ , ಮುನಿಯಪ್ಪ ,ಶಾಸಕರುಗಳಾದ ಎ ಆರ್ ಕೆ ,ಗಣೇಶ್ ಪ್ರಸಾದ್ ,ಯತೀಂದ್ರ, ಮಾಜಿ ಶಾಸಕರುಗಳಾದ ಆರ್ ನರೇಂದ್ರ ,ಜಯಣ್ಣ ,ಕೋಟೆ ಶಿವಣ್ಣ ,ಮುಖಂಡರುಗಳಾದ ರಂಗಸ್ವಾಮಿ ,ಮುಡ ಅಧ್ಯಕ್ಷರಾದ ಮರಿಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು .