Breaking News

ಜನಸಂಖ್ಯೆನಿಯಂತ್ರಣದ ಅರಿವು ಮೂಡಿಸಿ -ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಸೂಚನೆ

ಗಂಗಾವತಿಯಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ನಿಯಂತ್ರಣ ದಿನಾಚರಣೆ*

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾವತಿ : ನಗರದ ಉಪ ವಿಭಾಗ ಆಸ್ಪತ್ರೆಯ ಎಸ್ ಡಿಎಚ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ರಾಹುಲ್ ರತ್ನಂ ಪಾಂಡೆಯ ಅವರು ಚಾಲನೆ ನೀಡಿದರು.

ನಂತರ ಅವರು ಮಾತನಾಡಿ, ಸಾರ್ವಜನಿಕರಿಗೆ ಜನಸಂಖ್ಯೆ ನಿಯಂತ್ರಣ ಕುರಿತು ಅರಿವು ಮೂಡಿಸಬೇಕು. ಕುಟುಂಬ ಕಲ್ಯಾಣ ಯೋಜನೆ, ವಿಧಾನಗಳ ಬಗ್ಗೆ ತಿಳಿ ಹೇಳಬೇಕು. ಎಲ್ಲ ವಯೋಮಾನದವರಿಗೂ ಆರೋಗ್ಯ ಸೌಲಭ್ಯಗಳನ್ನು ತಲುಪಿಸುವ ಕೆಲಸವಾಗಲಿ ಎಂದರು.

‘ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ತಾತ್ಕಾಲಿಕ ವಿಧಾನದಲ್ಲಿ( ಪಿಪಿಐಯುಸಿಡಿ ) ಇದರಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ’ ಜಿಪಂ ಸಿಇಓ ಮಾನ್ಯ ರಾಹುಲ್ ರತ್ನಂ ಪಾಂಡೆಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಗತಿ ಪರಿಶೀಲನೆ ಸಭೆ : ಜಿಪಂ ಸಿಇಓ ಮಾನ್ಯ ರಾಹುಲ್ ರತ್ನಂ ಪಾಂಡೆಯ ಅವರು, ‘ಡೆಂಘೆ ನಿಯಂತ್ರಣ, ಆರ್ ಸಿಎಚ್ ತಾಯಿ- ಮಕ್ಕಳ ಆರೋಗ್ಯ ಕಾರ್ಯಕ್ರಮ, ಕುಟುಂಬ ಕಲ್ಯಾಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ, ಆಶಾಕಾರ್ಯಕರ್ತರು, ಕ್ಷೇತ್ರ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಲಾರ್ವ ಸಮೀಕ್ಷೆ ನಡೆಸಿ, ಡೆಂಘೆ ಜ್ವರ ನಿಯಂತ್ರಿಸುವ ಕೆಲಸ ಆಗಬೇಕು ಎಂದು ಸೂಚಿಸಿದರು.

ಗಂಗಾವತಿ ನಗರದ ತಾಯಿ ಮಕ್ಕಳ ಆಸ್ಪತ್ರೆಗೆ
ಜಿಪಂ ಸಿಇಓ ಮಾನ್ಯ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು. ರೋಗಿಗಳಿಗೆ ನೀಡುವ ಊಟದ ಪರಿಶೀಲನೆ ನಡೆಸಿ, ತಾವು ಕೂಡ ಅದೇ ಊಟ ಮಾಡಿದರು.

ಡಿಎಚ್ ಒ ಡಾ.ಲಿಂಗರಾಜು ಟಿ, ಜಿಲ್ಲಾ ಆರ್ ಸಿಎಚ್ ಅಧಿಕಾರಿಗಳಾದ ಡಾ.ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರನಾಥ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ನಂದಕುಮಾರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ.ಶಶಿಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ.ವೆಂಕಟೇಶ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ.ಪ್ರಕಾಶ ಎಚ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಗೌರಿಶಂಕರ್, ಡಾ.ಆನಂದ, ಡಾ.ರಾಮಾಂಜನೇಯ, ಡಾ.ಅಮರೇಶ, ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಈಶ್ವರ ಸವಡಿ, ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ವಿವಿಧ ವೃಂದದ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *