Release of excess water from KRS, take precautionary measures for people along the river, sub-divisional officer Mahesh informed.

ವರದಿ : ಬಂಗಾರಪ್ಪ .ಸಿ
ಚಾಮರಾಜನಗರ /ಹನೂರು : ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಲಿದ್ದು ಪ್ರವಾಹ ಭೀತಿ ಎದುರಾಗಿದೆ.
ಕೆಆರ್‌ಎಸ್ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ಹಾಗೂ ಕಬಿನಿ ಜಲಾಶಯದಿಂದಲೂ ಭಾರಿ ಪ್ರಮಾಣದ ನೀರನ್ನು ಹೊರ ಬಿಡುತ್ತಿರುವುದರಿಂದ ತಾಲೂಕಿನಲ್ಲಿರುವ ನದಿಪಾತ್ರದ ಗ್ರಾಮಗಳಾದ ದಾಸನಪುರ, ಹಳೇ ಅಣಗಳ್ಳಿ, ಹಳೇ ಹಂಪಾಪುರ,
ಎಡಕುರಿಯಾ, ಮುಳ್ಳೂರು ಗ್ರಾಮಗಳು ಮುಳುಗಡೆಯಾಗಲಿವೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ದವಾಗಿರುವ ತಾಲೂಕು ಆಡಳಿತ ಈ ಗ್ರಾಮಗಳು ನೀರಿನಲ್ಲಿ ಮುಳುಗಡೆಯಾದರೆ ಅಲ್ಲಿನ ಜನರನ್ನು ಬೇರೆಡೆ ಸ್ಥಳಾಂತರಿಸಲು ಕ್ರಮವಹಿಸಿದೆ. ಅಲ್ಲದೇ ಕೊಳ್ಳೇಗಾಲ, ಸತ್ತೇಗಾಲ, ಮುಳ್ಳೂರು ಸೇರಿದಂತೆ 6 ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಕ್ರಮವಹಿಸಿದ್ದು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಾದ ಮುನ್ನೆಚರಿಕೆ ಕ್ರಮಕೈಗೊಳ್ಳಲಾಗಿದೆ ,ಈಗಾಗಲೇ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಕ್ಕೆ ಜಿಲ್ಲೆಯ ಹಲವು ಗ್ರಾಮಗಳಿಗೆ ಪ್ರವಾಹ ಭೀತಿ ಎಂದು ತಿಳಿಸಿದರು .