Breaking News

ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿಯವರಜಂಟಿ ಸುದ್ದಿಗೋಷ್ಠಿ

ಬೆಗಳೂರು:ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಅವರು, ಮೊದಲನೇ ದಿನ ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಅಂಗೀಕರಿಸಲಾಗಿದೆ. ಮಾನ್ಯ ರಾಷ್ಟ್ರಪತಿ/ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿ ಮಂಡಿಸಲಾಗಿದೆ ಎಂದು 16ನೇ ವಿಧಾನಸಭೆಯ 4ನೇ ಅಧಿವೇಶನದಲ್ಲಿ ದಿನಾಂಕ ಜುಲೈ15ರಿಂದ 25ರವರೆಗೆ ಒಟ್ಟು 8 ದಿನಗಳ ಕಾಲ ಸುಮಾರು 37 ಗಂಟೆಯವರೆಗೆ ಕಾರ್ಯಕಲಾಪ ನಡೆಸಲಾಗಿದ್ದು, ಅಧಿವೇಶನದಲ್ಲಿ ಒಟ್ಟಾರೆ ಶೇ.85ರಷ್ಟು ಸದಸ್ಯರ ಹಾಜರಾತಿ ಇತ್ತು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಶುಕ್ರವಾರ ಮಾಹಿತಿ ನೀಡಿದರು..

ಜಾಹೀರಾತು

2024-25ನೇ ಸಾಲಿನ ಪೂರಕ ಅಂದಾಜುಗಳ ಮೊದಲನೇ ಕಂತನ್ನು ಜುಲೈ 23ರಂದು ಮಂಡಿಸಿ, ಜುಲೈ 24ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ಮಾರ್ಚ್ 2023ಕ್ಕೆ ಕೊನೆಗೊಂಡ ವರ್ಷದ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲೆ ನೀಡಿರುವ ಲೆಕ್ಕಪರಿಶೋಧನಾ ವರದಿ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಕಾಯ್ದೆಯ ಅನುಷ್ಠಾನದ ಮೇಲಿನ ಕಾರ್ಯ ನಿರ್ವಾಹಣಾ ಲೆಕ್ಕಪರಿಶೋಧನಾ ವರದಿ ಹಾಗೂ ಮಾರ್ಚ್ 2022ಕ್ಕೆ ಕೊನೆಗೊಂಡ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಸರಣಾ ಲೆಕ್ಕಪರಿಶೋಧನಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ‌ ಎಂದು‌ ತಿಳಿಸಿದರು.

ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2023-24ನೇ ಸಾಲಿನ ಎರಡನೇ ವರದಿ, ಕರ್ನಾಟಕ ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 2023-24ನೇ ಸಾಲಿನ 39ನೇ ವರದಿ, ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ 2023-24ನೇ ಸಾಲಿನ ಮೊದಲನೇ ವರದಿ, ಕರ್ನಾಟಕ ವಿಧಾನಸಭೆಯ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ 2023-24ನೇ ಸಾಲಿನ ಮೂರನೇ ವರದಿ, ಹಾಗೂ 2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿ ಹಾಗೂ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2023-24ನೇ ಸಾಲಿನ ಮೊದಲನೇ ವರದಿ ಮಂಡನೆಯಾಗಿವೆ ಎಂದು ವಿವರಿಸಿದರು.

ವಿಪಕ್ಷಗಳ ಅಹೋರಾತ್ರಿ ಧರಣಿ: ವಿಧಾನಸಭೆ, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕರ್ನಾಟಕ ವಿಧಾನಸಭೆಯ ನಿಯಮಾವಳಿ ಸಮಿತಿಯು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 212(1)ಕ್ಕೆ ತಿದ್ದುಪಡಿ ಮಾಡುವ ಸಂಬಂಧ ನಿಯಮಾವಳಿ ಸಮಿತಿಯ ಮಧ್ಯಂತರ ವರದಿಯನ್ನು ಜುಲೈ 24ರಂದು ಮಂಡಿಸಲಾಗಿದ್ದು, ಸದನವು ತಿದ್ದುಪಡಿಯನ್ನು ಅಂಗೀಕರಿಸಿದೆ. 2024-25ನೇ ಸಾಲಿನ ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಮಾನ್ಯ ಸದಸ್ಯರುಗಳನ್ನು ನಾಮನಿರ್ದೇಶನ ಮಾಡಲು ಜುಲೈ 25ರಂದು ಸದನವು ಮಾನ್ಯ ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ. ಒಟ್ಟು 23 ಅಧಿಸೂಚನೆಗಳು ಮತ್ತು 146 ವಾರ್ಷಿಕ ವರದಿಗಳು, 160 ಲೆಕ್ಕಪರಿಶೋಧನಾ ವರದಿಗಳು, 05 ಅನುಪಾಲನಾ ವರದಿಗಳು, 04 ಅನುಸರಣಾ ವರದಿ ಹಾಗೂ 01 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ 2023-24ನೇ ಸಾಲಿನ ಎರಡನೇ ವರದಿ, ಕರ್ನಾಟಕ ಕರ್ನಾಟಕ ವಿಧಾನಮಂಡಲದ ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ 2023-24ನೇ ಸಾಲಿನ 39ನೇ ವರದಿ, ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ 2023-24ನೇ ಸಾಲಿನ ಮೊದಲನೇ ವರದಿ, ಕರ್ನಾಟಕ ವಿಧಾನಸಭೆಯ ಸದಸ್ಯರುಗಳ ಖಾಸಗಿ ವಿಧೇಯಕಗಳ ಮತ್ತು ನಿರ್ಣಯಗಳ ಸಮಿತಿಯ 2023-24ನೇ ಸಾಲಿನ ಮೂರನೇ ವರದಿ, ಹಾಗೂ 2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿ ಹಾಗೂ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2023-24ನೇ ಸಾಲಿನ ಮೊದಲನೇ ವರದಿ ಮಂಡನೆಯಾಗಿವೆ ಎಂದು ವಿವರಿಸಿದರು.

ವಿಪಕ್ಷಗಳ ಅಹೋರಾತ್ರಿ ಧರಣಿ: ವಿಧಾನಸಭೆ, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕರ್ನಾಟಕ ವಿಧಾನಸಭೆಯ ನಿಯಮಾವಳಿ ಸಮಿತಿಯು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 212(1)ಕ್ಕೆ ತಿದ್ದುಪಡಿ ಮಾಡುವ ಸಂಬಂಧ ನಿಯಮಾವಳಿ ಸಮಿತಿಯ ಮಧ್ಯಂತರ ವರದಿಯನ್ನು ಜುಲೈ 24ರಂದು ಮಂಡಿಸಲಾಗಿದ್ದು, ಸದನವು ತಿದ್ದುಪಡಿಯನ್ನು ಅಂಗೀಕರಿಸಿದೆ. 2024-25ನೇ ಸಾಲಿನ ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಮಾನ್ಯ ಸದಸ್ಯರುಗಳನ್ನು ನಾಮನಿರ್ದೇಶನ ಮಾಡಲು ಜುಲೈ 25ರಂದು ಸದನವು ಮಾನ್ಯ ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ. ಒಟ್ಟು 23ಅಧಿಸೂಚನೆಗಳು ಮತ್ತು 146 ವಾರ್ಷಿಕ ವರದಿಗಳು, 160 ಲೆಕ್ಕಪರಿಶೋಧನಾ ವರದಿಗಳು, 05 ಅನುಪಾಲನಾ ವರದಿಗಳು, 04 ಅನುಸರಣಾ ವರದಿ ಹಾಗೂ 01 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ತಿಳಿಸಿದರು.

ಈ ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕ ಸೇರಿದಂತೆ ಒಟ್ಟು 13 ವಿಧೇಯಕಗಳನ್ನು ಮಂಡಿಸಲಾಗಿದ್ದು, 12 ವಿಧೇಯಕಗಳನ್ನು ಅಂಗೀಕರಿಸಲಾಗಿದೆ. ಉಳಿದಂತೆ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಪರಿಶೀಲನೆಗಾಗಿ ಒಪ್ಪಿಸಲು ತೀರ್ಮಾನಿಸಲಾಗಿದೆ ಎಂದರು.

ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಮತ್ತು ವಿಧಾನಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2024ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಪುನರ್ ಪರ್ಯಾಲೋಚಿಸಿ ಅಂಗೀಕರಿಸಲಾಗಿದೆ. ನಿಯಮ 60ರ ಅಡಿ ನೀಡಿದ್ದ 9 ಸೂಚನೆಗಳ ಪೈಕಿ 8ನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, 01 ಸೂಚನೆಯನ್ನು ತಿರಸ್ಕರಿಸಲಾಗಿದೆ. ಎರಡು ಸೂಚನೆಗಳನ್ನು ಚರ್ಚಿಸಲಾಗಿದೆ. ನಿಯಮ 69ರಡಿಯಲ್ಲಿ ಒಟ್ಟು 14 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಈ ಅವಧಿಯಲ್ಲಿ ಒಟ್ಟು 16 ಅರ್ಜಿಗಳನ್ನು ಸದನಕ್ಕೆ ಒಪ್ಪಿಸಲಾಗಿದೆ. ಒಟ್ಟು 2370 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 135 ಪ್ರಶ್ನೆಗಳ ಪೈಕಿ 117 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಲಿಖಿತ ಮೂಲಕ ಉತ್ತರಿಸುವ 1,902 ಪ್ರಶ್ನೆಗಳ ಪೈಕಿ 1,438 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ ಎಂದು ಸ್ಪೀಕರ್​​ ತಿಳಿಸಿದರು.

ನಿಯಮ 351 ರಡಿಯಲ್ಲಿ ಸ್ವೀಕೃತವಾದ 154 ಸೂಚನೆಗಳ ಪೈಕಿ 72 ಸೂಚನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 323 ಸೂಚನೆಗಳ ಪೈಕಿ 170 ಸೂಚನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ 03 ಸೂಚನೆಗಳನ್ನು ಚರ್ಚಿಸಲಾಗಿದೆ. ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭೆ ಸ್ಥಾನಗಳ ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂಬ ಬಗ್ಗೆ, ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುವುದರಿಂದ ಈ ಪ್ರಸ್ತಾವವನ್ನು ಅನುಷ್ಠಾನಗೊಳಿಸಬಾರದೆಂಬ ಬಗ್ಗೆ, ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ಪರೀಕ್ಷೆಯನ್ನು ರದ್ದುಪಡಿಸುವ ಬಗ್ಗೆ, ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ, 2006ರಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮತ್ತು ಸಮರ್ಪಕವಾಗಿ ಮಾರ್ಪಡಿಸುವ ಕುರಿತಂತೆ ಅಧಿಕೃತ ನಿರ್ಣಯಗಳನ್ನು ಸದನದಲ್ಲಿ ಮಂಡಿಸಲಾಗಿದೆ. ಸದನದಲ್ಲಿ ಅವುಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಹೇಳಿದರು.

ಮಳೆಗಾಲ ಅಧಿವೇಶನ: ಇಂದು-ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ

ಒಂದು ದಿನದ ಮುನ್ನವೇ ಅಧಿವೇಶ‌ನ ಕೊನೆಗೊಂಡಿರುವುದು ಬೇಸರದ ಸಂಗತಿ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಮತ್ತಿತರ ಸಮಸ್ಯೆಗಳ ಕುರಿತು ಚರ್ಚೆ ಆಗಲಿಲ್ಲ ಎಂದರು.

ನಂತರ ಮಾತನಾಡಿದ ವಿಧಾನಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ಅವರು, ವಿಧಾನಪರಿಷತ್ತಿನ 153ನೇ ಅಧಿವೇಶನದ ಉಪವೇಶನದಲ್ಲಿ ಜುಲೈ 15ರಿಂದ 25ರವರೆಗೆ ಒಟ್ಟು 8 ದಿನಗಳು ಅಂದರೆ, ಒಟ್ಟು 37 ಗಂಟೆ 30 ನಿಮಿಷಗಳ ಕಾಲ ಕಲಾಪಗಳು ನಡೆದಿದೆ. ಜುಲೈ 24 ರಂದು ಪರಿಷತ್ತು ಶೇ.93ರಷ್ಟು ಹಾಜರಾತಿಗೆ ಸಾಕ್ಷಿಯಾಗಿದೆ. ಈ ಅವಧಿಯಲ್ಲಿ ಒಟ್ಟು 1,251 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಸದನದಲ್ಲಿ ಉತ್ತರಿಸಬೇಕಿದ್ದ ಒಟ್ಟು 135 ಪ್ರಶ್ನೆಗಳ ಪೈಕಿ ಒಟ್ಟು 90 ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಈ ವೇಳೆ ಒಂದು ಪ್ರಶ್ನೆಗೆ ಉತ್ತರಿಸಲು ರೂ.93,000 ಖರ್ಚು ಮಾಡಬೇಕಾಗಿತ್ತು. ಎಂಎಲ್‌ಸಿಯೊಬ್ಬರು ಎಲ್ಲಾ 90,000 ಗ್ರಾಮ ಪಂಚಾಯಿತಿ ಸದಸ್ಯರ ವಿವರಗಳನ್ನು ಕೇಳಿದ್ದರು ಎಂದು ತಿಳಿಸಿದರು. ಲಿಖಿತ ಮೂಲಕ ಉತ್ತರಿಸುವ ಒಟ್ಟು 1,116 ಪ್ರಶ್ನೆಗಳ ಪೈಕಿ 348 ಪ್ರಶ್ನೆಗಳಿಗೆ ಉತ್ತರಗಳನ್ನು ಮಂಡಿಸಲಾಯಿತು. ನಿಯಮ 59ರಡಿಯಲ್ಲಿ ಒಟ್ಟು 5 ಸೂಚನೆಗಳನ್ನು ಸ್ವೀಕರಿಸಲಾಗಿದ್ದು, ಆ ಪೈಕಿ 01 ನಿಯಮ 68ಕ್ಕೆ ಪರಿವರ್ತಿಸಿ ಚರ್ಚಿಸಿ ಸರ್ಕಾರದಿಂದ ಉತ್ತರಿಸಲಾಯಿತು. 01ನ್ನು ನಿಯಮ 72ಕ್ಕೆ ಪರಿವರ್ತಿಸಿ ಚರ್ಚಿಸಿ ಸರ್ಕಾರದಿಂದ ಉತ್ತರ ಪಡೆಯಲಾಯಿತು. 02ನ್ನು ನಿಯಮ 330 ಪರಿವರ್ತಿಸಲಾಯಿತು. 01ನ್ನು ತಿರಸ್ಕರಿಸಲಾಯಿತು. 04 ಅಧಿಕೃತ ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. ನಿಯಮ 72ರಡಿಯಲ್ಲಿ ಸ್ವೀಕೃತವಾದ 126 ಸೂಚನೆಗಳನ್ನು 08 ಸೂಚನೆಗಳನ್ನು ಚರ್ಚಿಸಿ ಉತ್ತರಿಸಲಾಗಿದೆ. 49 ಸೂಚನೆಗಳಿಗೆ ಉತ್ತರಗಳನ್ನು ಮಂಡಿಸಲಾಗಿದೆ ಎಂದರು.

ನಿಯಮ 330ರಡಿಯಲ್ಲಿ ಸ್ವೀಕೃತವಾದ 87 ಸೂಚನೆಗಳಲ್ಲಿ 05 ಸೂಚನೆಗಳನ್ನು ಚರ್ಚಿಸಿ ಉತ್ತರಿಸಲಾಗಿದ್ದು, 31 ಸೂಚನೆಗಳಿಗೆ ಉತ್ತರ ಮಂಡಿಸಲಾಗಿದೆ. ನಿಯಮ 330ರಡಿಯಲ್ಲಿ ಸ್ವೀಕೃತವಾದ 87 ಸೂಚನೆಗಳಲ್ಲಿ 05 ಸೂಚನೆಗಳನ್ನು ಚರ್ಚಿಸಿ ಉತ್ತರಿಸಲಾಯಿತು. 31 ಸೂಚನೆಗಳಿಗೆ ಉತ್ತರಗಳನ್ನು ಮಂಡಿಸಲಾಯಿತು. ಶೂನ್ಯ ವೇಳೆಯಡಿಯಲ್ಲಿ ಸ್ವೀಕೃತವಾದ 62 ಸೂಚನೆಗಳ ಪೈಕಿ 39 ಸೂಚನೆಗಳಿಗೆ ಉತ್ತರ ಮಂಡಿಸಲಾಯಿತು ಎಂದು ತಿಳಿಸಿದರು.

ವಿಧಾನಪರಿಷತ್ತಿನ ವಿಧೇಯಕಗಳ ಪರಿಶೀಲನಾ ಸಮಿತಿಗೆ ವಹಿಸಲಾಗಿದ್ದ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ. ಸಹಕಾರ ಸಂಘಗಳ (ತಿದ್ದುಪಡಿ)ವಿಧೇಯಕಗಳನ್ನು ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ ತಿದ್ದುಪಡಿಗಳೊಂದಿಗೆ ಅಂಗೀಕರಿಸಲಾಯಿತು. ಅಲ್ಲದೆ ವಿಧಾನಸಭೆಯಿಂದ ತಿದ್ದುಪಡಿಗಳೊಂದಿಗೆ ಅಂಗೀಕೃತ ರೂಪದಲ್ಲಿದ್ದ ಎರಡು ವಿಧೇಯಕಗಳು ಹಾಗೂ ಅಂಗೀಕೃತ ರೂಪದಲ್ಲಿದ್ದ 10 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಧಾನಪರಿಷತ್ತಿನ ಎಲ್ಲಾ ಶಾಸಕರುಗಳಿಗೆ ಜಗತ್ತಿನ ಪ್ರಪ್ರಥಮ ಸಂಸತ್ ಆದ ಅನುಭವ ಮಂಟಪದ ಭಾವಚಿತ್ರವನ್ನು ನೀಡಲು ಉದ್ದೇಶಿಸಲಾಗಿದ್ದು, ಸಾಂಕೇತಿಕವಾಗಿ ಕೆಲವು ಶಾಸಕರುಗಳಿಗೆ ಮುಖ್ಯಮಂತ್ರಿಗಳು ವಿತರಿಸಿದರು ಎಂದು ಹೇಳಿದರು.

(ಆನ್ಲೈನ್ ಕೃಪೆ)

About Mallikarjun

Check Also

screenshot 2025 08 11 08 43 18 22 6012fa4d4ddec268fc5c7112cbb265e7.jpg

  ಇಂದಿನ ಭ್ರಷ್ಟಾಚಾರಕ್ಕೆ ಸ್ವಲ್ಪಮಟ್ಟಿಗೆ ಮಹಿಳೆಯರು ಕಾರಣ ಎನ್ನುವುದನ್ನು ಸುಳ್ಳು ಮಾಡಬೇಕಿದೆ.

We need to refute the notion that women are partly responsible for today's corruption. ಗಂಗಾವತಿ:ಇಂದಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.