Breaking News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ

Backward Classes Welfare Department hostels hope for future of students: Shivpriya Kadechura

ಜಾಹೀರಾತು


ಬೆಳಗಾವಿ, ಜುಲೈ 31(ಕರ್ನಾಟಕ‌ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಬುಧವಾರ(ಜು.31) ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು.


ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಸಾಕಷ್ಟು ಬದಲಾವಣೆಗಳು ಮತ್ತು ಸುಧಾರಣೆಗಳಾಗಿವೆ.
ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಆಹಾರದೊಂದಿಗೆ ಎಲ್ಲ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿರುತ್ತದೆ. ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಸುಸುಜ್ಜಿತವಾದ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸ್ಟಡಿ ಹಾಲ್ ,ಪೀಠೋಪಕರಣಗಳು ಇನ್ನಿತರ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಇದಲ್ಲದೇ ಮೆಟ್ರಿಕ್-ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ನೈಟ್ ಡ್ರೇಸ್ , ಟ್ರ್ಯಾಕ್ ಸೂಟ್ ಕೂಡ ನೀಡಲಾಗುತ್ತಿದೆ ಎಂದು ಶಿವಪ್ರಿಯಾ ವಿವರಿಸಿದರು.
ನಿಲಯದ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಶಿವಪ್ರಿಯಾ ಕಡಾಎಚೂರ ಅವರು, ವಿದ್ಯಾರ್ಥಿಗಳಿಗೆ ಇಂದಿನ ಸ್ಥರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬುದರ ಬಗ್ಗೆ ಸಲಹೆಗಳನ್ನು ನೀಡಿದರು.
ಜೊತೆಗೆ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡಿಸಬೇಕೆಂದು ಒಂದು ಕಾರ್ಯಾಗಾರವನ್ನು ಏರ್ಪಡಿಸುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು.
ವಿದ್ಯಾರ್ಥಿ ನಿಲಯದಲ್ಲಿ ದಿನಪತ್ರಿಕೆಗಳು, ನಿಯತಕಾಲಿಕೆಗಳು, ಸ್ಪರ್ಧಾತ್ಮಕ ಮ್ಯಾಗಜಿನ್ ನಿಯಮಿತವಾಗಿ ಸರಬರಾಜು ಆಗುತ್ತಿರುವ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿ ಖಾತರಿಪಡಿಸಿಕೊಂಡರು.
ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲ ಆಗದಂತೆ ಸರಕಾರ ನೀಡಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ನಿಲಯದ ಸಿಬ್ಬಂದಿಗೆ ಸೂಚನೆಯನ್ನು ನೀಡಿದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.