Breaking News

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

Invitation of Books for Children’s Book Moon Award

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು



ಕೊಪ್ಪಳ, ಆಗಸ್ಟ್ 01 (ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನಿಸಲಾಗಿದೆ.
ಕರ್ನಾಟಕ ಬಾಲವಿಕಾಸ ಆಕಾಡೆವಿಯು 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಯನ್ನು ಪ್ರದಾನ ಮಾಡಲು ಉದ್ದೇಶಿಸಿದ್ದು, ಆಯಾ  ಸಾಲಿನ ಅವಧಿಯಲ್ಲಿ ಅಂದರೆ ಜನೇವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ, ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತಿದೆ.
ಈ ಎಲ್ಲ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು/ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಆಗಸ್ಟ್ 26 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ: 0836-2465490, ಇಲ್ಲಿಗೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈ ಪ್ರಶಸ್ತಿಯ ಅರ್ಜಿ ನಮೂನೆ/ ಮಾನದಂಡಗಳನ್ನು ಕಚೇರಿಯ ವೆಬ್‌ಸೈಟ್ ಲಿಂಕ್  https://balavikasacademy.karnataka.gov.in/ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *