Appeal letter to SP condemning false complaint against Muda scam CM
ಗಂಗಾವತಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಡಾ ಹಗರಣ ಸೇರಿ ಸುಳ್ಳು ದೂರು ನೀಡುವ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ತಂದು ಅಧಿಕಾರದಿಂದ ಕೆಳಗಿಳಿಸಲು ವಿಪಕ್ಷಗಳ ಜತೆ ಸೇರಿ ಟಿ.ಜೆ. ಅಬ್ರಹಾಂ ಸೇರಿ ಕೆಲವರು ಷಡ್ಯಂತ್ರ ನಡೆಸಿದ್ದು ರಾಜ್ಯಪಾಲರು ನೋಟೀಸ್ ವಾಪಸ್ ಪಡೆಯುವಂತೆ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘದ ಸಂಸ್ಥಾಪಕ ಅಧ್ಯಕ್ಷ ಮುಸ್ತಫಾ ಪಠಾನ್ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸುಮಾರು ೪೦ ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದು, ಇಲ್ಲಿಯವರೆಗೂ ಅವರ ಮೇಲೆ ಒಂದು ಕಪ್ಪು ಚುಕ್ಕೆ ಬೀಳದ ಹಾಗೆ ನೇರ ನಡೆ-ನುಡಿಯುಳ್ಳವರಾಗಿ ಕಾನೂನು ಚೌಕಟ್ಟಿನಲ್ಲಿ ರಾಜ್ಯದ ಆಡಳಿತವನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಸರ್ವ ಸಮಾಜದ ಜನಾಂಗದವರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಟ್ಟಂತಹ ಮತ್ತು ಡಿ.ದೇವರಾಜ ಅರಸರನ್ನು ಹೋಲುವಂತಹ ಮಹಾನ್ ವ್ಯಕ್ತಿಯಾಗಿದ್ದಾರೆ. ಅಂತಹ ವ್ಯಕ್ತಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮತ್ತು ಜೆಡಿಎಸ್ ಪ್ರತಿಪಕ್ಷಗಳು ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಅವರ ಮುಖಾಂತರ ಶೋಕಾಸ್ ನೋಟಿಸ್ ನೀಡಿದನ್ನು ತಕ್ಷಣ ಹಿಂಪಡಿಯಬೇಕು. ಸ್ವಚ್ಛ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿಗಳಿಗೆ ಬಿಜೆಪಿ-ಜೆಡಿಎಸ್ ಮಾಡಿರುವ ಸುಳ್ಳು ಆರೋಪದಿಂದ ಯಾವುದೇ ತೊಂದರೆಯುAಟಾಗಬಾರದು. ಒಂದು ವೇಳೆ ಇದೇ ರೀತಿ ಮುಂದುವರೆದರೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕಿನ ಕಟ್ಟಡ ಕಾರ್ಮಿಕರು, ರೈತರು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಕುರಿಗಾಹಿ ಬಾಂಧವರೊAದಿಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯ, ತಹಶೀಲ್ದಾರರ ಕಾರ್ಯಾಲಯಗಳ ಮುಂದೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಗುಡದಪ್ಪ ಬಾನಪ್ಪನವರ ಹಲಗೇರಿ, ಮಂಜುಳಾ, ಶಿಲ್ಪಾ, ರೂಪಾ, ಪದ್ಮಾ, ಹನುಮಂತ ಅಬ್ಬಿಗೇರಿ, ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘದ ಸದಸ್ಯರು, ಕಟ್ಟಡ ಕಾರ್ಮಿಕರು, ರೈತರು, ಕುರಿಗಾಹಿ ಬಾಂಧವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.