Indian Medical call for strike from 17th 6 am to 6 pm 18th

ಸಿಂಧನೂರು :-ಆ 17 ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಕೋಲ್ಕತ್ತಾದ ಆರ್.ಜಿ.ಕೇರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ತಡರಾತ್ರಿ ನಡೆದಿದೆ . ವೈದ್ಯರ ಸುರಕ್ಷತೆ ಹಾಗೂ ಆರೋಪಿತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಆ 17 ಬೆಳಿಗ್ಗೆ 6 ಗಂಟೆಯಿಂದ ಆ 18 ಸಂಜೆ 6 ಗಂಟೆಯವರೆಗೆ ಮುಷ್ಕರಕ್ಕೆ ಕರೆ ನೀಡಿದ್ದು, ರಾಷ್ಟ್ರದ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಗಾಗಿ ರಾಯಚೂರು ಜಿಲ್ಲಾ ವಿವಿಧ ಖಾಸಗೀ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಮುಷ್ಕರಕ್ಕೆ ತನ್ನ ನೈತಿಕ ಬೆಂಬಲವನ್ನು ಸೂಚಿಸಿದೆ ಎಂದು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಹಂಪನಗೌಡ ಬಾದರ್ಲಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮಸ್ಕಿ ನಾಗರಾಜ ವಕೀಲರು ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
