Breaking News

ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ವಿತರಿಸಿದ ಉಸ್ತುವಾರಿ ಸಚಿವರು.

The minister in charge distributed compensation to the families of the students who died in the road accident.

ಜಾಹೀರಾತು

ಮಾನ್ವಿ: ತಾಲೂಕಿನ ಕುರ್ಡಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಭೇಟಿ ನೀಡಿ ಗುರುವಾರ ಕಪಗಲ್ ಗ್ರಾಮದ ಹತ್ತಿರದ ದೊಡ್ಡ ಹಳ್ಳದ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳಾದ ಶ್ರೀಕಾಂತ ಅವರ ತಂದೆ ಮಾರೇಶ ಹಾಗೂ ಸಮರ್ಥ ರವರ ತಂದೆ ಅಮರೇಶ ರವರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ತಲಾ 5 ಲಕ್ಷದಂತೆ 10 ಲಕ್ಷ ಪರಿಹಾರಧನವನ್ನು ವಿತರಿಸಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು ಹಾಗೂ ಗ್ರಾಮದಲ್ಲಿನ ಗಾಯಳು ವಿದ್ಯಾರ್ಥಿಗಳ ಕುಟುಂಬದವರಿಗೂ ಕೂಡ ಧೈರ್ಯ ತುಂಬಿ ತಮ್ಮ ಮಕ್ಕಳಿಗೆ ಸರಕಾರದಿಂದಲೇ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದ್ದು ಬೇಗನೆ ಚೇತರಿಸಿಕೊಳ್ಳಲಿದ್ದಾರೆ ಹಾಗೂ ಗಂಭೀರವಾಗಿ ಗಾಯಗಳಾಗಿರುವ ವಿದ್ಯಾರ್ಥಿಗಳಿಗೆ 3 ಲಕ್ಷ ಪರಿಹಾರವನ್ನು ನೀಡಲಾಗುವುದು ಮುಖ್ಯಮಂತ್ರಿಗಳು ಕೂಡ ಹೆಚ್ಚಿನ ಪರಿಹಾರ ನೀಡುವ ಬರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ರವಿಬೋಸರಾಜು ಎನ್.ಎಸ್.ಬೋಸರಾಜು ಫೌಂಡೇಶನ್ ವತಿಯಿಂದ ಮೃತ ವಿದ್ಯಾರ್ಥಿಗಳ ಕುಟುಂಬದ ಸದಸ್ಯರಿಗೆ ತಲಾ 1ಲಕ್ಷದಂತೆ 2 ಲಕ್ಷ ರೂ ಪರಿಹಾರವನ್ನು ನೀಡಿದರು.
ವಿಧಾನಪರಿಷತ್ ಸದಸ್ಯರಾದ ಎ.ವಸಂತಕುಮಾರ, ರಾಯಚೂರು ಗ್ರಾಮೀಣ ಶಾಸಕ ದದ್ದಲ್ ಬಸವನಗೌಡ, ಮಾನ್ವಿ ಶಾಸಕ ಹಂಪಯ್ಯನಾಯಕ, ಸಿಂಧನೂರು ಶಾಸಕ ಬಾದರ್ಲಿ ಹಂಪನಗೌಡ, ಮಾಜಿ ಶಾಸಕ ಬಸವನಗೌಡ ಬ್ಯಾಗವಾಟ್, ಜಿಲ್ಲಾಧಿಕಾರಿ ನಿತೀಷ.ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಜಿ.ಪಂ.ಸಿ.ಇ.ಓ. ಪಾಂಡೆ, ಸೇರಿದಂತೆ ಕಾಂಗ್ರೇಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

About Mallikarjun

Check Also

ಜ್ಞಾನಾಕ್ಷಿರಾಜರಾಜೇಶ್ವರಿ ಮ್ಯೂಸಿಕ್ ವಿಡಿಯೋ ಆಲ್ಬಮ್ ಶೀರ್ಷಿಕೆ ಅನಾವರಣ

Gnanakshi Rajarajeshwari Music Video Album Title Unveiled ಬೆಂಗಳೂರಿನ ಸುಪ್ರಸಿದ್ದ ಐತಿಹಾಸಿಕ ಶ್ರೀ ಜ್ಞಾನಾಕ್ಷಿ ರಾಜರಾಜೇಶ್ವರಿ ದೇವಸ್ಥಾನ, ಶ್ರೀ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.