ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಗಣೇಶ ಮೂರ್ತಿ ಭೂಮಿ ಪಾಲು

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

A lorry collided with a tractor carrying Ganesha idol, Ganesha Murti Bhoomi Palu

ಜಾಹೀರಾತು


ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಗಣೇಶನ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನರಿಗೆ ಗಾಯಗಳಾದ ಘಟನೆ ಸಂಭವಿಸಿದೆ.

ಶನಿವಾರದಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಯುವಕರು ಗಣೇಶ ಪ್ರತಿಷ್ಠಾಪನೆಗೆಂದು ಮೂರ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ನಗರದ ಬೈಪಾಸ್ ರಸ್ತೆಯಲ್ಲಿನ ಕೋಳೂರು ಕ್ರಾಸ್ ಬಳಿ ಹಿಂಬದಿಂದ ಬಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ, ನಾಲ್ಕು ಜನರು ಗಾಯಗೊಂಡ ಘಟನೆ ಸಂಭವಿಸಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಹಾಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total Views: 0
Share This Article