Breaking News

ಸ್ವಚ್ಛತಾ ಹಿ ಸೇವಾ ಅಭಿಯಾನಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಿಂದ ಚಾಲನೆ


ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ನ್ಯಾ.ಮಾರುತಿ ಎಸ್. ಬಾಗಡೆ

ಜಾಹೀರಾತು

Swachhta Hi Seva Abhiyan program launched by District Legal Services Authority Chairman


ರಾಯಚೂರು,ಸೆ.೨೭,:- ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್. ಬಾಗಡೆ ಅವರು ಹೇಳಿದರು.
ಅವರು ಸೆಪ್ಟೆಂಬರ್ ೨೭ರ ಶುಕ್ರವಾರದಂದು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ರಾಯಚೂರು ನಗರಸಭೆ ವತಿಯಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಸ್ಪತ್ರೆಯ ನರ್ಸ್ ಹಾಗೂ ಪೌರ ಕಾರ್ಮಿಕರ ಕಾರ್ಯ ಮೆಚ್ಚುವಂಥದ್ದು, ಅವರನ್ನು ನಿರ್ಲಕ್ಷ ಮಾಡದೆ ಅವರ ಕಾರ್ಯಕ್ಕೆ ಸಾಥ ನೀಡಬೇಕು. ಪೌರಕಾರ್ಮಿಕರು ಹಾಗೂ ನರ್ಸ್ಗಳು ತಮ್ಮ ಕಾಯಕ ನಿಲ್ಲಿಸಿದರೆ. ಜನರು ಹಾಗೂ ನಗರಗಳ ಗತಿ ಅದೋಗತಿ ಆಗುತ್ತದೆ. ಸಾರ್ವಜನಿಕರು ತಮ್ಮ-ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇದರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಕ್ಟೋಬರ್ ಎರಡರಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಬಸ್ ನಿಲ್ದಾಣದ ಸಮಗ್ರ ಸ್ವಚ್ಛತೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಮಾತನಾಡಿ, ಪ್ರತಿದಿನ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಬೇಕು. ಬೇರೆ-ಬೇರೆ ದೇಶಗಳಿಗೆ ನಮ್ಮ ದೇಶ ಹೋಲಿಸಿದರೆ ಸ್ವಚ್ಛತೆಯಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.

ಇದೇ ಸಂದರ್ಭದಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಶ್ರೀಕಾಂತ್ ಎಸ್.ವಿ, ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹತ್ತಿಕಾಳ್ ಪ್ರಭು ಸಿದ್ದಪ್ಪ, ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಸೇರಿದಂತೆ ಇತರೆ ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಇದ್ದರು.

About Mallikarjun

Check Also

ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಿ,ಶಿರಸ್ತೇದಾರ ರವಿಕುಮಾರ್ ನಾಯಕವಾಡಿ ಸಲಹೆ

Include the name in the voter list, Chief Ravikumar suggested ಜಿಎಚ್ ಎನ್ ಕಾಲೇಜಿನಲ್ಲಿ ಮತದಾರ ಪಟ್ಟಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.