Breaking News

ಗಾಂಧೀಜಿ ಜಯಂತ್ಯುತ್ಸವ: ಅ, 1ರಂದು ಕೊಪ್ಪಳ ಕೋಟೆ ಆವರಣದಲ್ಲಿ ಶ್ರಮದಾನ

Gandhiji Jayantyutsav: Shramadana in Koppal fort premises on A, 1st

ಜಾಹೀರಾತು

ಕೊಪ್ಪಳ ಸೆ.29 (ಕರ್ನಾಟಕ ವಾರ್ತೆ: ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ನಗರಾಭಿವೃದ್ಧಿ ಕೋಶ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅಕ್ಟೋಬರ್ 1ರಂದು ಕೊಪ್ಪಳ ಕೋಟೆ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 7 ರಿಂದ ಕೋಟೆ ಆವರಣದಲ್ಲಿ ನಡೆಯುವ ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಲಿದ್ದಾರೆ.
ಮಹಾತ್ಮ ಗಾಂಧೀಜಿಯವರು ಶ್ರಮದಾನಕ್ಕೆ ವಿಶೇಷ ಒತ್ತು ಕೊಟ್ಟಿದ್ದರು. ಅಕ್ಟೋಬರ್‌ನಲ್ಲಿ ನಡೆಯುವ ಗಾಂಧಿ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಜನತೆಗೆ ಉತ್ತಮ ಸಂದೇಶ ರವಾನೆಯಾಗುವ ನಿಟ್ಟಿನಲ್ಲಿ ವಾರ್ತಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಇನ್ನೀತರ ಇಲಾಖೆಗಳ ಸಹಯೋಗದಲ್ಲಿ ಅಕ್ಟೋಬರ್ 1ರಂದು ವಿಶೇಷವಾಗಿ ಹಮ್ಮಿಕೊಂಡ ಈ ಶ್ರಮದಾನ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳ ಸದಸ್ಯರು, ನಾಗರಿಕರು, ವಿದ್ಯಾರ್ಥಿ-ಯುವಜನರು, ಸಾಹಿತಿಗಳು, ಸರ್ವಜನರು ಭಾಗಿಯಾಗಲು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಜ್ಞಾನಾಕ್ಷಿರಾಜರಾಜೇಶ್ವರಿ ಮ್ಯೂಸಿಕ್ ವಿಡಿಯೋ ಆಲ್ಬಮ್ ಶೀರ್ಷಿಕೆ ಅನಾವರಣ

Gnanakshi Rajarajeshwari Music Video Album Title Unveiled ಬೆಂಗಳೂರಿನ ಸುಪ್ರಸಿದ್ದ ಐತಿಹಾಸಿಕ ಶ್ರೀ ಜ್ಞಾನಾಕ್ಷಿ ರಾಜರಾಜೇಶ್ವರಿ ದೇವಸ್ಥಾನ, ಶ್ರೀ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.